ಡಿವಿಜಿ ಸುದ್ದಿ, ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 50 ಲಕ್ಷ ರೈತರಿಗೆ 1 ಸಾವಿರ ಕೋಟಿ ಮೊತ್ತ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ರೈತರ ಖಾತೆಗೆ ಶನಿವಾರ ಬೆಳಿಗ್ಗೆಯಿಂದ ನೇರವಾಗಿ ಜಮೆಯಾಗಿದೆ ಎಂದು ಫೇಸ್‌ಬುಕ್ ನೇರ ಪ್ರಸಾರದಲ್ಲಿ ಸಚಿವರು ತಿಳಿಸಿದ್ದಾರೆ. ಇಂದು ರೈತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ರೈತರು ತಮ್ಮ ಖಾತೆಯನ್ನು ಪರಿಶೀಲಿಸಿ, ಹಣ ಜಮೆ ಬಗ್ಗೆ ಖಾತರಿಪಡಿಸಿಕೊಳ್ಳಿ ಎಂದಿದ್ದಾರೆ.
https://m.facebook.com/Kouravabcpatil/videos/352159812841508/?locale2=en_US
2019-20ನೇ ಸಾಲಿನ ಬೆಳೆ ವಿಮೆ ಮೊತ್ತವನ್ನು ಆಗಸ್ಟ್ 18 ರಂದು ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುವು ಎಂದು ಸಚಿವರು ಸ್ಪಷ್ಟಪಡಿಸಿದರು.



