ನವದೆಹಲಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸರ್ಕಾರ ಶಾಸಕ ಅರವಿಂದ್ ಲಿಂಬಾವಳಿ ನೇತೃತ್ವದದಲ್ಲಿ ಸತ್ಯ ಶೋಧನ ಸಮಿತಿ ನೇಮಿಸಿದೆ. ಇದರಿಂದ ತನಿಖೆಯಲ್ಲಿ ಸರ್ಕಾರಕ್ಕೆ ತನ್ನ ಅಧಿಕಾರಿಗಳು, ಪೊಲೀಸರ ಮೇಲೆ ನಂಬಿಕೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಗಲಭೆ ಕುರಿತು ಸರ್ಕಾರಕ್ಕೆ ಗೃಹ ಸಚಿವರು, ಪೊಲೀಸರ ಮೇಲೆ ನಂಬಿಕೆ ಇಲ್ಲವಾಗಿದೆ. ಈ ಮೂಲಕ ಶಾಸಕ ಅರವಿಂದ್ ಲಿಂಬಾವಳಿ ನೇತೃತ್ವದಲ್ಲಿ ಸತ್ಯಶೋಧನ ಸಮಿತಿ ರಚಿಸಿರುವುದು ದುರಂತ ಎಂದರು.
ಇನ್ನು ಗಲಭೆಗೂ ಬಿಬಿಎಂಪಿ ಸದಸ್ಯರಿಗೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಅನವಶ್ಯಕವಾಗಿ ಪಾಲಿಕೆ ಸದಸ್ಯರ ಹೆಸರು ಎಳೆದು ತರಲಾಗುತ್ತಿದೆ ಎಂದರು.