ಡಿವಿಜಿ. ಸುದ್ದಿ. ಕಾಂ, ಹೊನ್ನಾಳಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆಯಷ್ಟೇ ನಾನು ತಂತಿ ಮೇಲೆ ನಡೆಯುತ್ತಿದ್ದೇನೆ ಎನ್ನುವ ಮೂಲಕ ತಮ್ಮ ನೋವನ್ನು ತೋಡಿಕೊಂಡಿದ್ದರು. ಇದರ ಬೆನ್ನಲೇ ಸಿ.ಎಂ . ಕಾರ್ಯದರ್ಶಿ ರೇಣುಕಾಚಾರ್ಯ ತಮ್ಮದೇ ಪಕ್ಷದ ನಾಯಕರಿಗೆ ಬಹಿರಂಗ ಹೇಳಿಕೆ ನೀಡದಂತೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹೊನ್ನಾಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಯಾವುದೇ ಯೋಜನೆ ಜಾರಿಗೆ ತರಬೇಕಾದ್ರೂ , ಹತ್ತಾರು ಬಾರಿ ಯೋಚನೆ ಮಾಡಬೇಕಾಗುತ್ತದೆ ಎನ್ನುವ ಅರ್ಥದಲ್ಲಿ ಯಡಿಯೂರಪ್ಪ ನವರು ತಂತಿ ಮೇಲೆ ನಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ ಬೇರೆ ಅರ್ಥ ಕಲ್ಪಿಸಿಕೊಳ್ಳುವ ಅಗತ್ಯವಿಲ್ಲ ಎಂದರು.
ಪಕ್ಷದಲ್ಲಿ ಏನೇ ಸಮಸ್ಯೆ ಇದ್ದರೂ ಬಹಿರಂಗ ಹೇಳಿಕೆ ನೀಡದೆ ಕೂತು ಸಮಸ್ಯೆ ಬಗೆಹರಿಸೋಣ. ನೀವು ಈ ರೀತಿ ಹೇಳಿಕೆ ನೀಡಿದರೆ, ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ . ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬ ಮಾಸ್ ಲೀಡರ್. ಯಡಿಯೂರಪ್ಪನವರು ಹೋರಾಟದ ಮುಖಾಂತರ ಪಕ್ಷ ಕಟ್ಟಿದ್ದಾರೆ. ಪ್ರಶ್ನಾತೀತ ನಾಯಕರು. ಅವರ ಮೇಲೆ ಕಾಂಗ್ರೆಸ್ ನವರು ಸುಖಾ ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಈಶ್ವರಪ್ಪ , ಯಡಿಯೂರಪ್ಪ ಲವ ಕುಶ ಇದ್ದಂತೆ. ಈಶ್ವರಪ್ಪ ನವರು ಯಡಿಯೂರಪ್ಪ ನವರ ವಿರುದ್ಧ ಟೀಕೆ ಮಾಡಿಲ್ಲ. ಯಡಿಯೂರಪ್ಪ ಬಿಜೆಪಿ ಬಿಟ್ಟು ಹೋಗಿ, ವಾಪಸ್ಸು ಬಂದಿದ್ದು ಆಯ್ತು. ಪಕ್ಷ ಸಂಘಟನೆ ಮಾಡಿ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ. ಯಡಿಯೂರಪ್ಪ ನವರೇ ನಮ್ಮ ನಾಯಕರು. ನಾವೆಲ್ಲ ಯಡಿಯೂರಪ್ಪ ನವರ ಜೊತೆ ಇದೀವಿ ಎಂದರು.



