ದೆಹಲಿ: ಭಾರತೀಯ ಕ್ರಿಕೆಟ್ ನಲ್ಲಿ ಯಶಸ್ವಿ ನಾಯಕ, ಕೀಪರ್ ಆಗಿ ಮಿಂಚಿದ್ದ ಮಹೇಂದ್ರ ಸಿಂಗ್ ಧೋನಿ, ಅಂತರರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಧನ್ಯವಾದ ಅರ್ಪಿಸಿ, ಎರಡು ಪುಟಗಳ ಸುದೀರ್ಘ ಪತ್ರ ಬರೆದಿದ್ದಾರೆ.
ಪ್ರಧಾನಿ ಬರೆದ ಎರಡು ಪುಟಗಳ ಪತ್ರವನ್ನು ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಧೋನಿ ಅವರು ನರೇಂದ್ರ ಮೋದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ನೀವು ಪೋಸ್ಟ್ ಮಾಡಿದ ಅದೊಂದು ವಿಡಿಯೋ ಇಡೀ ರಾಷ್ಟ್ರದಲ್ಲಿ ಚರ್ಚೆಯ ವಿಷಯವಾಗಿತ್ತು. ನಿಮ್ಮ ನಿರ್ಧಾರ ದೇಶದ 130 ಕೋಟಿ ಜನರು ನಿರಾಶೆ ಮೂಡಿಸಿತ್ತು. ಭಾರತೀಯ ಕ್ರಿಕೆಟ್ ರಂಗಕ್ಕೆ ನೀವು ನೀಡಿದ ಕೊಡುಗೆಗೆ ಜನ ಶಾಶ್ವತವಾಗಿ ಕೃತಜ್ಞರಾಗಿರುತ್ತಾರೆ ಎಂದು ಪ್ರಧಾನಿ ಮೋದಿ ತಮ್ಮ ಪತ್ರದಲ್ಲಿ ಸ್ಮರಿಸಿದ್ದಾರೆ.
ಪ್ರಧಾನಿ ಪತ್ರವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ, ಕಲಾವಿದ, ಸೈನಿಕ, ಕ್ರೀಡ ಪಟುಗಳು ಮೆಚ್ಚುಗೆಗಾಗಿ ಹಂಬಲಿಸುತ್ತಾರೆ. ತಮ್ಮ ಪರಿಶ್ರಮ, ತ್ಯಾಗ ಮನ್ನಣೆಗೆ ಪಾತ್ರವಾಗಬೇಕು, ಎಲ್ಲರೂ ಪ್ರಶಂಸಿಸಬೇಕು ಎಂದು ಅಪೇಕ್ಷಿಸುತ್ತಾರೆ. ಮೆಚ್ಚುಗೆ ಮತ್ತು ಶುಭಾಶಯಗಳಿಗಾಗಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಧೋನಿ ಬರೆದುಕೊಂಡಿದ್ದಾರೆ.
https://twitter.com/msdhoni/status/1296362680580636672?ref_src=twsrc%5Etfw%7Ctwcamp%5Etweetembed%7Ctwterm%5E1296362680580636672%7Ctwgr%5E&ref_url=https%3A%2F%2Fwww.prajavani.net%2Fsports%2Fcricket%2Fmahendra-singh-dhoni-shares-letter-pm-modi-wrote-to-him-following-his-retirement-754838.html



