ಡಿವಿಜಿ ಸುದ್ದಿ,ದಾವಣಗೆರೆ: ಕೊರೊನಾದಿಂದ ಗುಣಮುಖರಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ದಾವಣಗೆರೆ ಮರಳಿದರು.
90ನೇ ವಯಸ್ಸಿನಲ್ಲಿ ಕೊರೊನಾ ಜಯಿಸಿ ಬಂದ ಶಾಮನೂರು ಶಿವಶಂಕರಪ್ಪ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಸ್ವಾಗತಿಸಿದರು. ಲೆಕ್ಕ ಪರಿಶೋಧಕ ಅಥಣಿ ವೀರಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಶಿವನಳ್ಳಿ ರಮೇಶ್, ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಎ.ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನಿ ಶಿವಕುಮಾರ್, ಜಿ.ಎಸ್.ಮಂಜುನಾಥ್ ಪುಷ್ಪಗುಚ್ಛ ನೀಡುವ ಮೂಲಕ ಸ್ವಾಗತಿಸಿಕೊಂಡರು.
ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾದಿಂದ ಗುಣಮುಖರಾದ ಹಿನ್ನೆಲೆ ಇಂದು ದಾವಣಗೆರೆ ಮರಳಿದರು.



