Connect with us

Dvgsuddi Kannada | online news portal | Kannada news online

ಟೆಸ್ಟ್ ಕ್ರಿಕೆಟ್ ನಲ್ಲಿ 600 ವಿಕೆಟ್ ಪಡೆದ ಮೊದಲ ವೇಗದ ಬೌಲರ್  ಜೇಮ್ಸ್ ಆ್ಯಂಡರ್ಸನ್

ಕ್ರೀಡೆ

ಟೆಸ್ಟ್ ಕ್ರಿಕೆಟ್ ನಲ್ಲಿ 600 ವಿಕೆಟ್ ಪಡೆದ ಮೊದಲ ವೇಗದ ಬೌಲರ್  ಜೇಮ್ಸ್ ಆ್ಯಂಡರ್ಸನ್

ಸೌತಾಂಪ್ಟನ್: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಅಜರ್ ಅಲಿ ವಿಕೆಟ್‌ ಪಡೆಯುವ ಮೂಲಕ ಇಂಗ್ಲೆಂಡ್ ವೇಗಿ ಜೇಮ್ಸ್‌ ಆ್ಯಂಡರ್ಸನ್‌ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 600 ವಿಕೆಟ್‌ ಪಡೆದ ಸಾಧನೆ ಮಾಡಿದರು. ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್‌ ಎನಿಸಿಕೊಂಡರು.

ಇಂಗ್ಲೆಂಡ್‌–ಪಾಕಿಸ್ತಾನ  ಟೆಸ್ಟ್‌ ಸರಣಿಯ ಅಂತಿಮ ಪಂದ್ಯದ ಕೊನೆಯ ದಿನ ಆ್ಯಂಡರ್ಸನ್‌ ಈ ದಾಖಲೆ ಬರೆದರು. 38 ವರ್ಷ ವಯಸ್ಸಿನ ವೇಗಿ ಇದುವರೆಗೆ ಒಟ್ಟು 156 ಟೆಸ್ಟ್ ಪಂದ್ಯಗಳಲ್ಲಿ  ಒಟ್ಟು 291 ಇನಿಂಗ್ಸ್‌ಗಳಲ್ಲಿ ಬೌಲಿಂಗ್‌ ಮಾಡಿರುವ ಅವರು 26.77ರ ಸರಾಸರಿಯಲ್ಲಿ ಇಷ್ಟು ವಿಕೆಟ್ ಪಡೆದಿದ್ದಾರೆ.

jems2

ಒಟ್ಟಾರ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಜೇಮ್ಸ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಸ್ಪಿನ್ನರ್‌ಗಳಾದ ಶ್ರೀಲಂಕಾದ ಮುತ್ತಯ್ಯ ಮುರುಳಿಧರನ್‌ (800), ಆಸ್ಟ್ರೇಲಿಯಾದ ಶೇನ್‌ ವಾರ್ನ್‌ (708) ಮತ್ತು ಭಾರತದ ಅನಿಲ್‌ ಕುಂಬ್ಳೆ (619) ಮೊದಲ ಮೂರು ಸ್ಥಾನಗಳಲ್ಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೀಡೆ

ದಾವಣಗೆರೆ

Advertisement
Advertisement Enter ad code here

Title

To Top