ಡಿವಿಜಿ ಸುದ್ದಿ, ಮೈಸೂರು: ಮುಖ್ಯಮಂತ್ರಿ ಸಿಎಂ ಬಿ. ಎಸ್. ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ 5 ಸಾವಿರ ಕೋಟಿ ಭ್ರಷ್ಟಾಚಾರ ಆರೋಪವನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಈ ಬಗ್ಗೆ ಪತ್ರವೊಂದನ್ನು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಬಿಡುಗಡೆ ಮಾಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಕಳೆದ ಒಂದು ವರ್ಷದಲ್ಲಿ 5 ಸಾವಿರ ಕೋಟಿ ಸಂಗ್ರಹ ಮಾಡಿದ್ದಾರೆ. ಬಿಜೆಪಿ ಪಕ್ಷದ ಶಾಸಕರೇ ಹೈಕಮಾಂಡ್ಗೆ ಬರೆದಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದರು.

ವಿಜಯೇಂದ್ರ ಅವರ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ಆಡಿಯೋ ಮತ್ತು ವಿಡಿಯೋ ಕ್ಲೀಪಿಂಗ್ಗಳನ್ನು ನಾವು ಸಂಗ್ರಹಿಸಿದ್ದೇವೆ. ಆದರೆ ಬಿಜೆಪಿ ಶಾಸಕರು ಬರೆದಿದ್ದಾರೆ ಎನ್ನಲಾದ ಪತ್ರದ ಬಗ್ಗೆ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರಕ್ಕೆ 20 ದಿನಗಳ ಸಮಯ ನೀಡುತತ್ತೇವೆ. ಸರ್ಕಾರ ಯಾವುದೇ ಕ್ರಮಕೈಗೊಳ್ಳದಿದ್ದಾರೆ ಸೆಪ್ಟೆಂಬರ್ ತಿಂಗಳ ಎರಡು ಅಥವಾ ಮೂರನೇ ವಾರದಲ್ಲಿ ದೆಹಲಿಯಲ್ಲಿ ಆಡಿಯೋ, ವಿಡಿಯೋ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಬಿಡುಗಡೆ ಮಾಡಿರುವ ಪತ್ರದಲ್ಲಿ ಬಿಜೆಪಿ ಶಾಸಕರೇ ಹೈಕಮಾಂಡ್ಗೆ ಬರೆದಿದ್ದು, 7 ಶಾಸಕರು ಪತ್ರಕ್ಕೆ ಸಹಿ ಮಾಡಿದ್ದಾರೆ ಎನ್ನಲಾಗಿದೆ. 32 ಜನರ ಕೂಟವನ್ನು ವಿಜಯೇಂದ್ರ ಮಾಡಿಕೊಂಡಿದ್ದು, ಪರ್ಯಾಯ ಸರ್ಕಾರ ನಡೆಸುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪ ಮಾಡಿದ್ದಾರೆ. 32 ಜನರ ಕೂಟದ ವಿವರ ಹಾಗೂ ಫೋಟೋ ಸಮೇತ ಪತ್ರದಲ್ಲಿ ವಿವರಣೆಯನ್ನು ನೀಡಲಾಗಿದೆ



