Connect with us

Dvgsuddi Kannada | online news portal | Kannada news online

ಕೈಮಗ್ಗ, ಜವಳಿ ತಂತ್ರಜ್ಞಾನ ಡಿಪ್ಲೊಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಕೈಮಗ್ಗ, ಜವಳಿ ತಂತ್ರಜ್ಞಾನ ಡಿಪ್ಲೊಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ದಾವಣಗೆರೆ : 2020-21ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರತಿ ಅಭ್ಯರ್ಥಿಗೆ ಪ್ರತಿ ತಿಂಗಳು ರೂ.1000 ರಿಂದ 1200 ರವರೆಗೆ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಅಭ್ಯರ್ಥಿಯು 15 ರಿಂದ 23 ವರ್ಷ ವಯೋಮಾನದಾವರಾಗಿರಬೇಕು. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ವರ್ಷ ವಯೋಮಾನದಾವರಾಗಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.

ಮೇಲ್ಕಂಡ ಡಿಪ್ಲೋಮಾ ಕೋರ್ಸ್‍ಗಾಗಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)- 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ, (ತಮಿಳುನಾಡು)- 15 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ-03 ಅಭ್ಯರ್ಥಿಗಳು(ನೆಲ್ಲೂರು, ಆಂಧ್ರಪ್ರದೇಶ) ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ)-02 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗಗಾಗಿ ಕರೆಯಲಾಗುವುದು. ಹೆಚ್ಚಿನ ವಿವರಗಳಿಗಾಗಿ ಕಚೇರಿಯ ದೂ.ಸಂ: 08192-262362 ಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು,  ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ – ಬೆಟಗೇರಿ – 587 102, (ಕರ್ನಾಟಕ) ಇಲ್ಲಿಗೆ ಸಲ್ಲಿಸಬೇಕು. ನ.10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್.ಎನ್ ತಡಕನಹಳ್ಳಿ  ತಿಳಿಸಿದ್ದಾರೆ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top