ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ಲಾಕ್‌ಡೌನ್ ಘೋಷಣೆ ನಂತರ ಕೆಲಸ,ವೇತನವಿಲ್ಲದೆ ಸಂಕಷ್ಟದಲ್ಲಿರುವ 2 ಲಕ್ಷಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ತಕ್ಷಣ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಸರ್ಕಾರಿ ಶಾಲಾ– ಕಾಲೇಜುಗಳಲ್ಲಿ ಅತಿಥಿ ಶಿಕ್ಷಕ ಮತ್ತು ಉಪನ್ಯಾಸಕ ರಜಾ ದಿನಗಳನ್ನು ಕೋವಿಡ್ 19 ಲಾಕ್ ಡೌನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ಗೌರವಧನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ಇದೇ ಮಾರ್ಚ್‌ವರೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕು. ವಸತಿ ಶಾಲೆಗಳಲ್ಲಿ ಆರರಿಂದ 12ನೇ ತರಗತಿವರೆಗೆ ಮಕ್ಕಳ ಪ್ರವೇಶಕ್ಕೆ ನಿಗದಿಪಡಿಸಿದ ಪೋಷಕರ ಆದಾಯ ಮಿತಿ ಹೆಚ್ಚಿಸಬೇಕು. ಖಾಸಗಿ ಶಾಲೆಗಳಿಗೆ ಆರ್‌ಟಿಇ ಅಡಿ ಬಾಕಿ ಉಳಿಸಿಕೊಂಡಿರುವ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.



