Connect with us

Dvgsuddi Kannada | online news portal | Kannada news online

ನ್ಯಾಯಾಂಗ ನಿಂದನೆ; ವಕೀಲ ಪ್ರಶಾಂತ್‌ ಭೂಷಣ್‌ ಗೆ 1 ರೂಪಾಯಿ ದಂಡ

ರಾಷ್ಟ್ರ ಸುದ್ದಿ

ನ್ಯಾಯಾಂಗ ನಿಂದನೆ; ವಕೀಲ ಪ್ರಶಾಂತ್‌ ಭೂಷಣ್‌ ಗೆ 1 ರೂಪಾಯಿ ದಂಡ

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್‌ ಭೂಷಣ್ ಅವರಿಗೆ 1 ರೂಪಾಯಿ  ದಂಡ ವಿಧಿಸಿ ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಎಸ್ಎ ಬೊಬಡೆ ಮತ್ತು ಸುಪ್ರೀಂ ಕೋರ್ಟ್‌ ವಿರುದ್ಧ ಮಾಡಿದ್ದ ಟ್ವೀಟ್‌ಗಳ ಕಾರಣ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಗಿತ್ತು.

ನ್ಯಾಯಮೂರ್ತಿ ಅರುಣ್‌ ಮಿಶ್ರಾ ನೇತೃತ್ವದ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠವು ಸೋಮವಾರ ತೀರ್ಪು ನೀಡಿದೆ. ಸೆಪ್ಟೆಂಬರ್‌ 15ರೊಳಗೆ ಪ್ರಶಾಂತ್‌ ಭೂಷಣ್‌ ಅವರು ದಂಡ ಪಾವತಿಸಬೇಕು. ಇಲ್ಲವಾದಲ್ಲಿ 3 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಹಾಗೂ 3 ವರ್ಷಗಳು ವಕೀಲಿಕೆಯಿಂದ ನಿರ್ಬಂಧಿಸಲಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

ಸುಪ್ರೀಂಕೋರ್ಟ್‌ ಹಾಗೂ ಮುಖ್ಯ ನ್ಯಾಯಮೂರ್ತಿ  ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್‌ ಮಾಡಿದ್ದ ಪ್ರಕರಣದಲ್ಲಿ ಪ್ರಶಾಂತ್ ತಪ್ಪಿತಸ್ಥರು ಎಂದು ಆಗಸ್ಟ್‌14ರಂದು‌ ಸುಪ್ರೀಂಕೋರ್ಟ್ ಆದೇಶಿಸಿತ್ತು. ಪ್ರಶಾಂತ್‌ಭೂಷಣ್ ಮಾಡಿದ್ದ ಎರಡು ಟ್ವೀಟ್‌ಗಳು ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮ ಎಂದು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಹೇಳಿತ್ತು.

ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಕ್ಷಮೆಯಾಚಿಸಲು ಹಿರಿಯ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಭೂಷಣ್‌ ನಿರಾಕರಿಸಿದ್ದರು. ಅಪ್ರಾಮಾಣಿಕವಾಗಿ ಕ್ಷಮೆಯಾಚಿಸಿದರೆ ನನ್ನ ಆತ್ಮಸಾಕ್ಷಿಗೆ ಮೋಸ ಮಾಡಿದಂತಾಗುತ್ತದೆ ಎಂದು ಹೇಳಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top