ಡಿವಿಜಿ ಸುದ್ದಿ, ತುಮಕೂರು:ಡ್ರಗ್ಸ್ ಮಾಫಿಯಾ ಹಣದಿಂದ ಬಿಜೆಪಿ , ಮೈತ್ರಿ ಸರ್ಕಾರವನ್ನು ಬೀಳಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಗಂಭೀರ ಆರೋಪ ಮಾಡಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಅವಧಿಯಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಕಠಿಣ ಕ್ರಮ ಕೈಗೊಂಡಿದ್ದೆ. ಡ್ರಗ್ ಮಾಫಿಯಾ ಹಣವನ್ನು ಬಿಜೆಪಿ ಪಕ್ಷ ಮೈತ್ರಿ ಸರ್ಕಾರ ಬೀಳಿಸಲು ಬಳಿಸಿಕೊಂಡಿದೆ ಎಂದರು.
ಈ ವಿಚಾರವನ್ನು ಮಾಧ್ಯಮದಲ್ಲಿ ಹೆಚ್ಚಿಗೆ ಚರ್ಚೆ ಆಗಬಾರದು. ಇದರಿಂದ ಎಳೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತದೆ. ನಾನು ಚಿತ್ರ ನಿರ್ಮಾಪಕನಾಗಿದ್ದ ಕಾಲದಲ್ಲಿ ಡ್ರಗ್ ಮಾಫಿಯಾ ಇರಲಿಲ್ಲ ಎಂದರು.



