ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾ ಕುರಿತು ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳದಿದ್ದರೆ, ಕಾನೂನಿನ ಮೂಲಕ ಹೋರಾಟ ಮಾಡುತ್ತೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತನ್ನ ಸದಸ್ಯತ್ವ ಪ್ರಶ್ನಿಸಿದ್ದಕ್ಕೆ ಪತ್ರಿಕ್ರಿಯಿಸಿದ ಅವರು, ನಮ್ಮ ತಂದೆ 30 ವರ್ಷಗಳಿಂದ ಚಿತ್ರರಂಗದಲ್ಲಿದ್ದರು. ನಾನು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದೇನೆ. ನಿರ್ದೇಶನ ಮಾಡಿದ್ದೇನೆ. ಚಿತ್ರರಂಗದ ಒಳಿತಿಗಾಗಿ ಈ ವಿಚಾರದಲ್ಲಿ ಬಹಿರಂಗವಾಗಿ ಮಾತನಾಡಿದ್ದೇನೆ ಎಂದು ತಿಳಿಸಿದರು.
ನಾನು ಒಬ್ಬ ಮೆಸೆಂಜರ್. ಸಿಸಿಬಿ ವಿಚಾರಣೆಯಲ್ಲಿ ನನ್ನ ಹೇಳಿಕೆಗೆ ನಾನು ಬದ್ಧವಾಗಿದ್ದೇನೆ. ಮಾಧ್ಯಮಗಳಿಗೆ ಹೇಳಿರುವುದಿಲ್ಲವೂ ಸತ್ಯ. ಡ್ರಗ್ ಮಾಫಿಯಾ ವಿಚಾರದಲ್ಲಿನಾನು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಅಷ್ಟೇ ಎಂದು ತಿಳಿಸಿದರು.
ನಾನು ಕೊಟ್ಟಿರುವ ಮಾಹಿತಿ ಆಧರಿಸಿ ಪೋಲೀಸರಿಗೆ ಸರಿಯಾಗಿ ತನಿಖೆ ಮಾಡಬೇಕು. ನೀಡಿದ ಮಾಹಿತಿಯನ್ನ ಆಧರಿಸಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನನ್ನ ಪರ ವಿರೋಧದ ಚರ್ಚೆ ಯ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಒಂದು ಪ್ರಕರಣದಿಂದ ಕಾನೂನಿನ ರೀತಿಯಲ್ಲಿ ಚಿತ್ರರಂಗಕ್ಕೆ ಒಳ್ಳೆಯದಾದರೆ ಅದೇ ನನಗೆ ದೊಡ್ಡ ಸಂತೋಷ. ಮುಂದಾದರೂ ಆ ಕಳಂಕ ಬಾರದಂತೆ ನೋಡಿಕೊಳ್ಳಬೇಕಿದೆ ಎಂದರು.



