ಡಿವಿಜಿ ಸುದ್ದಿ, ಬೆಂಗಳೂರು : ನಟಿ ರಾಗಿಣಿ ದ್ವಿವೇದಿ ಆಪ್ತ ರವಿ ಶಂಕರ್ ಬಳಿಕ ಮತ್ತೊಬ್ಬ ನಟಿ ಸಂಜನಾ ಗಲ್ರಾನಿಯ ಆಪ್ತ ರಾಹುಲ್ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಸಿಸಿಬಿ ಪೊಲೀಸರು ನಟಿ ರಾಗಿಣಿ ಆಪ್ತ ರವಿಶಂಕರ್ ಹಾಗೂ ಸಂಜನಾ ಗಲ್ರಾನಿ ಆಪ್ತ ರಾಹುಲ್ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ರಾತ್ರಿ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ರಾತ್ರಿಯೇ ರಾಹುಲ್ ನನ್ನು ಸಿಸಿಬಿ ಕಚೇರಿಗೆ ಕರೆತರಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ರವಿ ಶಂಕರ್ನನ್ನು ವಶಕ್ಕೆ ಪಡೆಯುತ್ತಿದ್ದಂತೆ ನಟಿ ರಾಗಿಣಿ ವಕೀಲರ ಮೊರೆ ಹೋಗಿದ್ದು, ವಿಚಾರಣೆ ಎದುರಿಸುವ ಕುರಿತು ಸಲಹೆಗಳನ್ನು ಪಡೆಯುತ್ತಿದ್ದಾರೆ.



