Connect with us

Dvgsuddi Kannada | online news portal | Kannada news online

120 ಕೋಟಿ ವೆಚ್ಚದಲ್ಲಿ ಜೋಗ ಜಲಪಾತ ಅಭಿವೃದ್ಧಿ: ಸಚಿವ ಸಂಪುಟ ಸಭೆ ತೀರ್ಮಾನ

ಪ್ರಮುಖ ಸುದ್ದಿ

120 ಕೋಟಿ ವೆಚ್ಚದಲ್ಲಿ ಜೋಗ ಜಲಪಾತ ಅಭಿವೃದ್ಧಿ: ಸಚಿವ ಸಂಪುಟ ಸಭೆ ತೀರ್ಮಾನ

ಡಿವಿಜಿ ಸುದ್ದಿ, ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಜೋಗಜಲಪಾತವನ್ನು  ಕರ್ನಾಟಕ ವಿದ್ಯುತ್‌ ನಿಗಮದಿಂದ 120 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಭೆ  ತೀರ್ಮಾನಿಸಿದೆ.

ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, 120 ಕೋಟಿ ವೆಚ್ಚದಲ್ಲಿ  ರೋಪ್‌ ವೇ, ಉದ್ಯಾನ, ಜಲಕ್ರೀಡೆ, ಕೆಫೆಟೇರಿಯಾ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಹಿಂದೆ ಮೆಸರ್ಸ್‌ ಬಿಆರ್‌ಎಸ್‌ ಸಂಸ್ಥೆಗೆ ನೀಡಿದ್ದ ಗುತ್ತಿಗೆಯನ್ನು ರದ್ದುಪಡಿಸಲಾಗಿದೆ. 450 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿತ್ತು. ಆದರೆ ಅವರು ಕಾಮಗಾರಿ ಕೈಗೆತ್ತಿಕೊಳ್ಳಲು ಮುಂದಾಗಲಿಲ್ಲ ಎಂದು ತಿಳಿಸಿದರು.

ಇನ್ನು ವಿಶ್ವಬ್ಯಾಂಕ್‌ ನೆರವಿನೊಂದಿಗೆ 20 ಜಿಲ್ಲೆಗಳ ಆಯ್ದ ತಾಲ್ಲೂಕುಗಳಲ್ಲಿ 10 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಜಲಾನಯನ ಪ್ರದೇಶದ ಪುನರುಜ್ಜೀವನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 600 ಕೋಟಿ ವೆಚ್ಚದ ಈ ಯೋಜನೆಗೆ ರಾಜ್ಯ ಸರ್ಕಾರ 180 ಕೋಟಿ ಮತ್ತು ವಿಶ್ವಬ್ಯಾಂಕ್‌ 420 ಕೋಟಿ  ಭರಿಸಲಿವೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌ ಮತ್ತು ಎಂಜನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಡಿಜಿಟಲ್‌ ಕಲಿಕೆಗೆ ಅನುಮೋದನೆ ನೀಡಲಾಗಿದೆ. 430 ಪ್ರಥಮ ದರ್ಜೆ ಕಾಲೇಜುಗಳು, 87 ಪಾಲಿಟೆಕ್ನಿಕ್ ಮತ್ತು 14 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಿದ್ದು,  ಇದಕ್ಕಾಗಿ 35 ಕೋಟಿ ಅನುದಾನ ನೀಡಲಾಗಿದೆ ಎಂದರು.

ಸೊರಬ ಪಟ್ಟಣ ಪಂಚಾಯಿತಿ ಪುರಸಭೆಯಾಗಿ, ಯಾದಗಿರಿ ಜಿಲ್ಲೆ ದೇವದುರ್ಗಾ ತಾಲ್ಲೂಕು ಅರಕೇರಾ ಗ್ರಾಮ ಪಂಚಾಯಿತಿ ತಾಲ್ಲೂಕ್‌ ಆಗಿ ಹಾಗೂ ಮುಧೋಳ ತಾಲ್ಲೂಕು ಲೋಕಾಪುರ ಗ್ರಾಮ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಎಂದು ತಿಳಿಸಿದರು.

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 225 ಕ್ಕೆ ಹೆಚ್ಚಿಸಲು ಚರ್ಚೆಲಾಗುತ್ತಿದ್ದು, ಬಿಬಿಎಂಪಿ ಕ್ಷೇತ್ರ ಪುನರ್‌ವಿಂಗಡಣೆ ಮಾಡಬೇಕಾಗಿರುವುದರಿಂದ ಚುನಾವಣೆ ಮುಂದೂಡಲು ಕೋರಿಕೆ ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top