ಡಿವಿಜಿ ಸುದ್ದಿ, ಬೆಂಗಳೂರು: ಸಿಸಿಬಿ ಪೊಲೀಸರು ಮೊತ್ತೊಂದು ಡ್ರಗ್ಸ್ ಜಾಲವನನ್ನು ಪತ್ತೆ ಹಚ್ಚಿದ್ದಾರೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಸಿಬಿ ಪೊಲೀಸರು ಕೆ.ಆರ್.ಪುರಂ ವ್ಯಾಪ್ತಿಯಲ್ಲಿ ಮತ್ತೊಂದು ಡ್ರಗ್ಸ್ ಜಾಲದ ಮೇಲೆ ದಾಳಿ ಮಾಡಿದ್ದಾರೆ. ಕಾರ್ಯಾಚರಣೆ ವೇಳೆ 2 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 20 ಲಕ್ಷಕ್ಕೂ ಅಧಿಕವಾಗಿದೆ ಎಂದು ತಿಳಿಸಿದರು.
ಡ್ರಗ್ಸ್ ಕಾಲೇಜುಗಳಲ್ಲೂ ಕಂಡು ಬರುತ್ತಿದೆ. ಇದರಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಲಾಗಿದೆ. ಮೂವರನ್ನು ಕೇಳರ ಮೂಲದವರು ಎಂದು ಪತ್ತೆ ಮಾಡಲಾಗಿದೆ. ಲಂಡನ್‍ನಲ್ಲಿ ಓದಿ ಬಂದಿದ್ದ ಯುವಕ ಡ್ರಗ್ಸ್ ದಂಧೆ ಮಾಡುತ್ತಿದ್ದನು. ಮನೆಯೊಂದರ ಮೇಲೆ ದಾಳಿ ನಡೆಸಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಕಾಲೇಜು, ಶಾಲೆಗಳಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿವೆ. ಹೀಗಾಗಿ ಕಾಲೇಜು, ಶಾಲಾ ಆಡಳಿತ ಮಂಡಳಿ ನಮಗೆ ಸಹಕರಿಸಬೇಕು. ಡ್ರಗ್ಸ್ ದಂಧೆಯನ್ನು ಕಡಿವಾಣ ಹಾಕಲು ಪ್ರಯತ್ನ ಮಾಡುತ್ತಿದ್ದೇವೆ. ಆಡಳಿತ ಮಂಡಳಿ ನಮ್ಮ ಜೊತೆ ಕೈ ಜೋಡಿಸಬೇಕು ಎಂದರು.
1 ಕೆಜಿ700 ಗ್ರಾಂ ಬಂಗಾರ ವಶ

ಸಿಸಿಬಿ ಪೊಲೀಸರು ಮತ್ತೊಂದು ಕಾರ್ಯಾಚರಣೆ ನಡೆಸಿದ್ದು, 1 ಕೆಜಿ 700 ಗ್ರಾಂ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. 2017-2018ರಲ್ಲಿ ನಡೆದಿದ್ದ 37 ಸರಗಳ್ಳತನ ಕೇಸನ್ನು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಒಂದು ವಾರದೊಳಗೆ ಚಿನ್ನ ಕಳೆದುಕೊಂಡಿದವರಿಗೆ ಅವರ ಬಂಗಾರವನ್ನು ವಾಪಸ್ ಕೊಡಲಾಗುವುದು ಎಂದರು.



