ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ನಷ್ಟದ ಕುರಿತು ಅಧ್ಯಯನ ನಡೆಸಲು ಕೇಂದ್ರ ತಂಡ ರಾಜ್ಯಕ್ಕೆ ಇಂದು ಆಗಮಿಸಲಿದೆ.
ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಕೆ.ವಿ. ಪ್ರತಾಪ್ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರದಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲ್ಲಿದ್ದು, ಪ್ರವಾಹ ಕುರಿತು ಅಧ್ಯಯ ನಡೆಸಲಿದೆ.
ಕೇಂದ್ರ ತಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಿದೆ. ಮಂಗಳವಾರ ಕೊಡಗು, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅಧ್ಯಯನ ನಡೆಸಲಿದೆ. ಬುಧವಾರ ಬೆಂಗಳೂರಿಗೆ ಮರಳುವ ತಂಡ, ಕಂದಾಯ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಿದೆ.
ಕೇಂದ್ರ ಸರ್ಕಾರವು ನೆರೆ ಪರಿಹಾರವಾಗಿ 395 ಕೋಟಿ ಮುಂಗಡವಾಗಿ ನೀಡಿದೆ. ಹಾನಿ ಪ್ರದೇಶದಲ್ಲಿ ಈಗಾಗಲೇ ವೈಮಾನಿಕ ಸಮೀಕ್ಷೆ ನಡೆಸಿರುವ ಮುಖ್ಯ ಮಂತ್ರಿ, ಕೇಂದ್ರ ತಂಡಕ್ಕೆ ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. 4,800 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲು ಕಂದಾಯ ಇಲಾಖೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.



