ಡಿವಿಜಿ ಸುದ್ದಿ, ಬೆಂಗಳೂರು: ನಗರದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆಯನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು.
ಸಾಕಷ್ಟು ವಿರೋಧ ನಡುವೆಯೂ ಸರ್ಕಾರ ಅಧಿಕೃತವಾಗಿ ಮೇಲ್ಸೇತುವೆ ಉದ್ಘಾಟಿಸಿದೆ. ಯಲಹಂಕದ ಡೈರಿ ಸರ್ಕಲ್ ಬಳಿರುವ ಮೇಲ್ಸೇತುವೆಗೆ ವೀರ ಸಾವರ್ಕರ್ ಅವರ ಹೆಸರನ್ನು ಇಡಲಾಗಿದೆ. 388.35 ಮೀಟರ್ ಉದ್ದದ ಈ ಮೇಲ್ಸೇತುವೆಯನ್ನು ಬಿಬಿಎಂಪಿಯಿಂದ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಈ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕಾಂಗ್ರೆಸ್, ಜೆಡಿಎಸ್ ವಿರೋಧಿಸಿತ್ತು. ಹೀಗಾಗಿ ಯಾವುದೇ ಪ್ರತಿಭಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಎಸ್‍ಆರ್ ವಿಶ್ವನಾಥ್, ಸಚಿವರಾದ ಸಿಟಿ ರವಿ, ಡಿಸಿಎಂ ಅಶ್ವಥ್ ನಾರಾಣ್, ಗೃಹ ಸಚಿವ ಬಸವರಾಜ್ ಬೊಮ್ಮಯಿ ಮತ್ತು ಬೈರತಿ ಬಸವರಾಜ ಭಾಗಿಯಾಗಿದ್ದರು.



