ಡಿವಿಜಿ ಸುದ್ದಿ, ಯಾದಗಿರಿ: ವಾಲ್ಮೀಕಿ ಸಮುದಾಯದ ಮೀಸಲಾತಿ ವಿಚಾರದಲ್ಲಿ ಶ್ರೀಗಳು ರಾಜೀನಾಮೆ ನೀಡಿ ಎಂದರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ರಾಜೂಗೌಡ ಹೇಳಿಕೆ ನೀಡಿದ್ದಾರೆ.
ಎಸ್‍ಟಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿದ ಅವರು,ನಾನು ನಮ್ಮ ಶ್ರೀಗಳಿಗೆ ನೀಡಿದ ಮಾತಿಗೆ ಇಂದಿಗೂ ಬದ್ಧ. ಶ್ರೀಗಳು ವಿಧಾನಸಭೆಯಲ್ಲಿ ಹೋರಾಟ ಮಾಡು ಎಂದರೂ ಮಾಡುತ್ತೇನೆ. ಶ್ರೀಗಳ ಆಜ್ಞೆ ಏನು ಇರುತ್ತೋ ಅದನ್ನು ಪಾಲಿಸುತ್ತೇನೆ ಎಂದರು.
ನಾವು ಇನ್ನೂ ಹುಡುಗರಿದ್ದು, ಮೈಯಲ್ಲಿ ಜೋಶ್ ಇದೆ. ಏನು ಬೇಕಾದರೂ ಮಾತನಾಡುತ್ತೇವೆ. ಆದರೆ ನಮ್ಮ ಹಿಂದೆ ಸತೀಶ್ ಜಾರಕಿಹೊಳಿಯಂತ ಹಿರಿಯರು ಇದ್ದಾರೆ. ಅವರ ಮಾರ್ಗದಲ್ಲಿ ನಮ್ಮ ಹೋರಾಟ ಮುಂದುವರಿಸುತ್ತೇವೆ. ಸಂಪುಟ ವಿಸ್ತರಣೆಗೆ ನಮ್ಮ ಮುಖ್ಯಮಂತ್ರಿಗಳು ಮನಸ್ಸು ಮಾಡಿದ್ದಾರೆ. ಈ ಬಾರಿಯಾದರೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಸಚಿವ ಸ್ಥಾನ ನೀಡಬೇಕು ಎಂಬುದು ನಮ್ಮ ಒತ್ತಾಯವಿದೆ ಎಂದರು.



