ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿನ ಡ್ರಗ್ಸ್ ಜಾಲ ಬಗ್ಗೆ ಮಾಧ್ಯಮ , ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಳ್ಳುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಡ್ರಗ್ಸ್ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಳ್ಳುವಂತೆ ಸಂಬರಗಿ ಅವರಿಗೆ ನೋಟಿಸ್ ನೀಡಿದೆ.
ಶನಿವಾರ ಬೆಳಿಗ್ಗೆ ಸಿಸಿಬಿ ಕಚೇರಿಗೆ ಬರುವಂತೆ ನೋಟಿಸ್ ನೀಡಲಾಗಿದೆ. ಅವರಿಂದ ಮಾಹಿತಿ ಪಡೆದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.



