ಡಿವಿಜಿ ಸುದ್ದಿ, ದಾವಣಗೆರೆ: ಚನ್ನಗಿರಿ ತಾಲೂಕಿನ, ನಲ್ಕುದುರೆ ಗ್ರಾಮದ ಎಂ.ಜಿ.ಶಶಿಕಲಾ ಮೂರ್ತಿ ಅವರನ್ನು ಮಾಯಕೊಂಡ ಕ್ಷೇತ್ರದ, ಬಸವಾ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಈ ಬಗ್ಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಶಿಕಲಾ ಮೂರ್ತಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಿಸುತ್ತಿರುವ ಸೇವೆ ಪರಿಗಣಿಸಿ ಶಾಸಕ ಶಾಮನೂರು ಶಿವಶಂಕರಪ್ಪ , ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ.
ಪಕ್ಷದ ಬಲವರ್ಧನೆಗೆ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸ್ಥಳೀಯ ಮುಖಂಡರ ಸಹಯೋಗದೊಂದಿಗೆ ಪಕ್ಷವನ್ನು ಸಂಘಟಿಸಲು ಸೂಚಿಸಿದ್ದಾರೆ.



