ಡಿವಿಜಿ ಸುದ್ದಿ, ದಾವಣಗೆರೆ: ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಸಿ.ಎನ್ ಅವರು ನಾಳೆ (ಸೆ.12) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಹೊನ್ನಾಳಿ ತಲುಪಿ, 10.30ಕ್ಕೆ ಹೊನ್ನಾಳಿ ಪಟ್ಟಣದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಇಲಾಖೆಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ನ್ಯಾಮತಿಗೆ ತೆರಳಿ ನ್ಯಾಮತಿ ಪಟ್ಟಣದಲ್ಲಿ ಇಲಾಖೆಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮವನ್ನು ನೆರೆವೇರಿಸುವರು.
ಮಧ್ಯಾಹ್ನ 2.30 ಕ್ಕೆ ನ್ಯಾಮತಿಯಿಂದ ಹೊರಟು 3.30 ಕ್ಕೆ ದಾವಣಗೆರೆ ಆಗಮಿಸಿ, ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ವಿಜ್ಞಾನ ಮತ್ತು ಸಮಾಜಶಾಸ್ತ್ರ ಬ್ಲಾಕ್ಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಕುಲಪತಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 6 ಗಂಟೆಗೆ ದಾವಣಗೆರೆಯಿಂದ ಹೊರಟು ಬೆಂಗಳೂರು ತಲುಪಲಿದ್ದಾರೆ.



