ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣ ಕೇಸ್ ಗೆ ಸಬಂಧಿಸಿದಂತೆ ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಸಿಸಿಬಿ ನೋಟಿಸ್ ನೀಡಿದ ಹಿನ್ನೆಲೆ ಇಂದು ಕಚೇರಿಗೆ ಹಾಜರಾದರು.
ಸಿಸಿಬಿ ವಿಚಾಋಣೆಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸತ್ಯಕ್ಕೆ ಆಯಸ್ಸು ಜಾಸ್ತಿ ಇದೆ. ಇಂದು ಸತ್ಯದ ದೀಪ ಬೆಳಗುತ್ತಿದ್ದೇನೆ. ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ ಎಂದರು.

ಸರ್ಕಾರಕ್ಕೆ ತೆರಿಗೆ ಕಟ್ಟುವ ನಾನು ಇವತ್ತು ಸರ್ಕಾರಕ್ಕೆ ಇನ್ನೊಂದು ಆದಾಯವನ್ನು ತಂದು ಕೊಡುತ್ತೇನೆ. ಜಮೀರ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ. ಜಮೀರ್ ಅಹಮ್ಮದ್ ಖಂಡಿತ ಅವರ ಆಸ್ತಿಯನ್ನು ಸರ್ಕಾರಕ್ಕೆ ನೀಡಬೇಕಾಗುತ್ತೆ. ಅದಕ್ಕೆ ಸಂಬಂಧಿಸಿದ ದಾಖಲಾತಿಗಳು ನನ್ನ ಬಳಿ ಇದೆ ಎಂದು ಫೈಲ್ ತೋರಿಸಿದ ಪ್ರಶಾಂತ್ ಸಿಸಿಬಿ ಕಚೇರಿ ಒಳ ಹೋದರು.



