Connect with us

Dvgsuddi Kannada | online news portal | Kannada news online

ಚನ್ನಗಿರಿ:  ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕ್ರೈಂ ಸುದ್ದಿ

ಚನ್ನಗಿರಿ:  ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಡಿವಿಜಿ ಸುದ್ದಿ, ಚನ್ನಗಿರಿ:  ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ  ಪತ್ತೆಯಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಇರೋಡಿ ತಾಂಡಾದಲ್ಲಿ ನಡೆದಿದೆ.

ಶಿಲ್ಪಾ (22) ಸಾವನ್ನಪ್ಪಿದ ಗೃಹಿಣಿ. ವರದಕ್ಷಿಣೆ ಕಿರುಕಳ ನೀಡಿ ಕೊಲೆ ಮಾಡಿದ್ದಾರೆ ಎಂದು ಮೃತ ಶಿಲ್ಪಾಳ ಪೋಷಕರು ಆರೋಪಿಸಿದ್ದಾರೆ. ಶಿಲ್ಪಾ ಆರು ತಿಂಗಳ ಹಿಂದೆಯಷ್ಟೇ  ದೀಪಕ್ ಜೊತೆ ಮದುವೆಯಾಗಿದ್ದು, ಮೂರು ತಿಂಗಳ ಗರ್ಭಿಣಿ ಕೂಡಾ ಅಗಿದ್ದರು  ಎಂದು ತಿಳಿದುಬಂದಿದೆ.

ಮನೆಯಲ್ಲಿಯೇ ನೇಣು ಬಿಗಿದುಕೊಂಡ ಸ್ಥಿತಿ ಕಂಡ ಫೋಷಕರು ಗಲಾಟೆ ಮಾಡಿದ್ದಾರೆ. ಜಗಳದ ನಂತರ ಶಿಲ್ಪಾ ಪತಿ ದೀಪಕ್ ಹಾಗೂ ಆತನ ಕುಟುಂಬದ ಸದಸ್ಯರು ನಾಪತ್ತೆಯಾಗಿದ್ದಾರೆ. ಪತಿ ಮತ್ತು ಆತನ ಮನೆಯವರೇ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಶಿಲ್ಪಾ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top