ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ. ಈ ಮೂಲಕ ನಟಿ ರಾಗಿಣಿ ವಿಚಾರಣ ಖೈದಿಯಾಗಿ ಹರಪ್ಪನ ಅಗ್ರಹಾರ ಶಿಫ್ಟ್ ಆಗಲಿದ್ದಾರೆ. ಅವರ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ವಿಚಾರಣೆ ನಡೆಯಲಿದೆ.
ಕೆಲ ಹೊತ್ತಿನಲ್ಲಿ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಿದ್ದಾರೆ. ಸೆ. 27 ವರೆಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ನೀಡಿದೆ. ರಾಗಿಣಿ ಜೊತೆ ಪ್ರಶಾಂತ್ ರಂಕ, ನಿಯಾಜ್ , ರಾಹುಲ್, ವಿರೇಮ್ ಖನ್ನಾ, ಲೂಮ್ ಪೆಪ್ಪರ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾರೆ.



