ಡಿವಿಜಿ ಸುದ್ದಿ, ದಾವಣಗೆರೆ: ಕರ್ನಾಟಕದಲ್ಲಿ ಹಿಂದಿ ನಾಮಫಲಕ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ. ಎಸ್. ರಾಮೇಗೌಡ ರಾಷ್ಟ್ರೀಯ ಹೆದ್ದಾರಿ ಬಳಿಯ ಹಿಂದಿ ನಾಮಫಲಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರಿಕೆ ಖಂಡನೀಯ. ಸಂವಿಧಾನದ 8 ಪರಿಷ್ಛೇದಕ್ಕೆ ತಿದ್ದುಪಡಿ ತಂದು 22 ಭಾಷೆಗಳನ್ನೂ ಆಡಳಿತ ಭಾಷೆಯನ್ನಾಗಿ ಮಾಡಬೇಕು. ಹಿಂದಿ ಭಾಷೆಯಂತೆ ಎಲ್ಲ ಭಾಷೆಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಎಲ್ಲಾ ಭಾಷಿಕರಿಗೆ ಸಮಾನ ಅವಕಾಶ ಒದಗಿಸಬೇಕು. ಹಿಂದಿ ಸಪ್ತಾಹ, ಹಿಂದಿ ದಿವಸವನ್ನು ಆಚರಣೆಯನ್ನು ಕೊನೆಯಾಗಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನೇ ಬಳಸಬೇಕು ಎಂದು ಒತ್ತಾಯಿಸಿದರು.