ಡಿವಿಜಿ ಸುದ್ದಿ, ದಾವಣಗೆರೆ: ಸೆ.20 ರಂದು ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್- ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ನಡೆಯಲಿದ್ದು, ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಇಲಾಖಾ ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ನಗರದ 15 ಪರೀಕ್ಷಾ ಕೆಂದ್ರಗಳಲ್ಲಿ ಬೆಳಿಗ್ಗೆ 11 ರಿಂದ 12.30 ರವರೆಗೆ ಪರೀಕ್ಷೆ ನಡೆಯಲಿವೆ. ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ಸೂಚಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಸಮಯಕ್ಕಿಂತ 90 ನಿಮಿಷ ಮುಂಚಿತವಾಗಿ ಹಾಜರಾಗಲು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



