ಡಿವಿಜಿ ಸುದ್ದಿ, ಮೈಸೂರು: ತಾಲ್ಲೂಕಿನ ಹಾಲಾಳು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಟ ಡಾ.ವಿಷ್ಣುವರ್ಧನ್ ಸ್ಮಾರಕ ಭವನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
ಭಾರತಿ ವಿಷ್ಣುವರ್ಧನ್, ಅನಿರುದ್ಧ್, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಭಾಗಿಯಾಗಿದ್ದರು.
ಕನ್ನಡನಾಡು ಕಂಡ ಅಪ್ರತಿಮ ಕಲಾವಿದ ದಿವಂಗತ ಡಾ. ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಇಂದು ಆನ್ ಲೈನ್ ಮೂಲಕ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಡಾ. ವಿಷ್ಣುವರ್ಧನ್ ತವರು ಜಿಲ್ಲೆ ಮೈಸೂರಿನಲ್ಲಿ, ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಔಚಿತ್ಯಪೂರ್ಣವಾಗಿದ್ದು, ಸುಸಜ್ಜಿತ ಸ್ಮಾರಕ ನಿರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ. pic.twitter.com/IOKulAIlVQ
— B.S.Yediyurappa (@BSYBJP) September 15, 2020
ಸರ್ಕಾರ 2010-11 ರ ಬಜೆಟ್ ನಲ್ಲಿ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ 11 ಕೋಟಿ ಅನುದಾನ ಮೀಸಲಿರಿಸಿತ್ತು. ಐದು ಎಕರೆ ಜಮೀನಿನಲ್ಲಿ ಸ್ಮಾರಕ ಭವನ ನಿರ್ಮಾಣವಾಗಲಿದೆ. ಜಾಗಕ್ಕೆ ಸಂಬಂಧಿಸಿದಂತೆ ತಕರಾರು ಇದ್ದ ಕಾರಣ ನಿರ್ಮಾಣ ಕಾರ್ಯ ತಡವಾತ್ತು.



