ಡಿವಿಜಿ ಸುದ್ದಿ, ಕಲಬರುಗಿ: 73ನೇಯ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಇಂದು ಚಾಲನೆ ನೀಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನರವೇರಿಸಿದರು.
ನಗರದ ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಾಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದರು.

ನಂತರ ಮಾತನಾಡಿದ ಅವರು, ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿ ವಿಭಾಗದಲ್ಲಿ ಸ್ವಾತಂತ್ರ್ಯ ಸಂಭ್ರಮ ಕಳೆಗಟ್ಟಿದೆ. ಬ್ರಿಟಿಷರಿಂದ ದೇಶಕ್ಕೆ ಆಗಸ್ಟ್ 15 ರಂದು ಸ್ವಾತಂತ್ರ್ಯ ದೊರೆತಿದ್ದರೆ ಅಂದಿನ ಹೈದ್ರಾಬಾದ್ ಕರ್ನಾಟಕ, ಈಗಿನ ಕಲ್ಯಾಣ ಕರ್ನಾಟಕಕ್ಕೆ ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ಸಿಕ್ಕಿತ್ತು. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತದೆ. ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತದೆ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ @BSYBJP ರವರು ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. (1/3)#ಕಲ್ಯಾಣಕರ್ನಾಟಕ pic.twitter.com/8wPeuZVmS3
— CM of Karnataka (@CMofKarnataka) September 17, 2020
ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಉಮೇಶ್ ಜಾದವ್, ಸಚಿವ ಆರ್.ಅಶೋಕ್, ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್, ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವರು ಕಲ್ಯಾಣ ಕರ್ನಾಟಕದ ಉತ್ಸವದಲ್ಲಿ ಭಾಗಿಯಾಗಿದ್ದರು.



