ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ, ನಿರೂಪಕ ಸೇರಿ ಮೂವರಿಗೆ ನೋಟಿಸ್ ನೀಡಿದೆ.
ಆರ್ ವಿ ದೇವರಾಜ್ ಮಗ ಯುವರಾಜ್, ನಟ ಸಂತೋಷ್ ಕುಮಾರ್ ಹಾಗೂ ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ನೋಟಿಸ್ ನೀಡಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗುವಂತೆ ವಾಟ್ಸಾಪ್ ಮೂಲಕ ನೋಟಿಸ್ ನೀಡಿದೆ.
ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಈಗಾಗಲೇ ನಟಿಯರಾದ ರಾಗಿಣಿ, ಸಂಜನಾ ಸೇರಿದಂತೆ ಇತರೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಬುಧವಾರ ಸ್ಟಾರ್ ದಂಪತಿಗಳಾದ ದಿಗಂತ್- ಐಂದ್ರಿತಾ ರೇ ಸಿಸಿಬಿ ನೋಟಿಸ್ ನೀಡಿ ವಿಚಾರಣೆ ಮಾಡಿದೆ.



