ನವದೆಹಲಿ : ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೊನಾ ಸೋಂಕಿನಿಂದ ನಿಧನ ಹೊಂದಿದ್ದಾರೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
2004 ರಿಂದ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತವಾಗಿ 4 ಬಾರಿ ಆಯ್ಕೆಯಾಗಿದ್ದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. ಮುಂಬೈ ಕರ್ನಾಟಕ ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದರು. ಪತ್ನಿ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು.