ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಅ. 28, ನ.3 ಹಾಗೂ ನ.7ರಂದು ಹಂತದಲ್ಲಿ ಮತದಾನ ನಡೆಯಲಿದೆ. ನ.10ರಂದು ಫಲಿತಾಂಶ ಪ್ರಕಟವಾಗಲಿದೆ.
243 ಸದಸ್ಯ ಬಲದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಿದೆ. ಮತದಾನದ ಸಮಯವನ್ನು ಸಂಜೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಕೋವಿಡ್ ರೋಗಿಗಳು ದಿನದ ಕೊನೆಯ ಗಂಟೆಯಲ್ಲಿ ಮತ ಚಲಾಯಿಸಲು ಅವಕಾಶ ನೀಡಲಾಗಿದೆ.

ಕೊರೊನಾ ವೈರಸ್ ಹಿನ್ನೆಲೆ ಚುನಾವಣೆಗೆ 7 ಲಕ್ಷ ಹ್ಯಾಂಡ್ ಸ್ಯಾನಿಟೈಸರ್, 46 ಲಕ್ಷ ಮಾಸ್ಕ್, 6 ಲಕ್ಷ ಪಿಪಿಇ ಕಿಟ್, 6.7 ಲಕ್ಷ ಫೇಸ್ ಶೀಲ್ಡ್, 23 ಲಕ್ಷ ಜೋಡಿ ಕೈಗವಸುಗಳನ್ನು ಆಯೋಗವು ಚುನಾವಣೆಗಾಗಿ ವ್ಯವಸ್ಥೆ ಮಾಡಿಕೊಂಡಿದೆ.ಅಗತ್ಯವಿರುವ ಕಡೆ ಮತ್ತು ವಿನಂತಿಸಿದ ಕಡೆಗಳಲ್ಲಿ ಅಂಚೆ ಮತಪತ್ರ ಸೌಲಭ್ಯವನ್ನುಒದಗಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದಾರೆ.



