ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ಒಂದೇ ದಿನ 144 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 15,451ಕ್ಕೆ ಏರಿಕೆಯಾಗಿದೆ.
ಇಂದು ಕೊರೊನಾದಿಂದ 73 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 12,368 ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 240 ಮಂದಿ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,843 ಸಕ್ರಿಯ ಪ್ರಕರಣಗಳಿವೆ.
ಇಂದು ಪತ್ತೆಯಾದ ಪ್ರಕರಣಗಲ್ಲಿ ದಾವಣಗೆರೆ 49, ಹರಿಹರ 25, ಜಗಳೂರು 18, ಹರಿಹರ 03, ಹೊನ್ನಾಳಿ 48 ಹಾಗೂ ಹೊರ ಜಿಲ್ಲೆಯ 01 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.



