ಡಿವಿಜಿ ಸುದ್ದಿ, ಬೆಂಗಳೂರು: ಕೃಷಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿರುವ ತಿದ್ದುಪಡಿ ಮಸೂದೆ ವಿರೋಧಿಸಿ ರೈತರಪರ ಸಂಘಟನೆ ಗಳು ಕರೆ ನೀಡಿರುವ ಬಂದ್ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೇಶದಾದ್ಯಂತ ರೈತ ಪರ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟಿವೆ. ಕೇಂದ್ರ , ರಾಜ್ಯ ಸರ್ಕಾರದ ಈ ನಿರ್ಧಾರಗಳು ರೈತರ ವಿರೋಧಿಯಾಗಿದ್ದು, ಈ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ.
ನಾಳೆಯ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂಪೂರ್ಣವಾಗಿ ಭಾಗಿಯಾಗಲಿದ್ದಾರೆ. ರೈತರ ವಿರೋಧಿಯಾಗಿರುವ ಈ ಎರಡು ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂಬುದು ರೈತರಪರ ಸಂಘಟನೆಗಳು ಒತ್ತಾಯವಾಗಿದೆ. ಕಾಂಗ್ರೆಸ್ ಪಕ್ಷ ಕೂಡ ಸದನದ ಒಳಗೆ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದು, ಸದನದ ವರಗೂ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಲಿದೆ ಎಂದರು.



