ಡಿವಿಜಿ ಸುದ್ದಿ, ದಾವಣಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೃಷಿ ಕಾಯ್ದೆ ಜಾರಿ ವಿರೋಧಿಸಿ ರೈತಪರ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ದಾವಣಗೆರೆಯಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಕ್ಲೋಸ್ ಮಾಡಿ ರೈತರ ಹೋರಾಟಕ್ಕೆ ಬೆಂಬಲ ಸೂಚಿದರು.
ಅಖಿಲ ಭಾರತ ಕಿಸಾನ್ ಸಭಾ, ವಿವಿಧ ರೈತ ಸಂಘಗಳು, ಕಾಂಗ್ರೆಸ್, ಜೆಡಿಎಸ್, ಸಿಪಿಐ, ಸಿಪಿಐಎಂ, ಎಸ್‌ಯುಸಿಐ, ಸಿಐಟಿಯು, ಎಐಡಿಎಸ್‌ಒ, ದಲ್ಲಾರ ಸಂಘ, ದಲಿತ ಸಂಘರ್ಷ ಸಮಿತಿ ಕನ್ನಡ ಪರ ಸಂಘಟನೆಗಳು ಸಹಿತ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಹೋರಾಟ ಸಮಿತಿಗಳು, ಸಂಘಗಳು ಪ್ರತಿಭಟನೆಯಲ್ಲಿ ಭಾಗಿಯಾದವು.
ನಗರದಲ್ಲಿ ವ್ಯಾಪಾಯ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಪ್ರತಿಭಟನಕಾರರು ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಕೂಗಿದರು. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
3 ಕೆಎಸ್‌ಆರ್‌ಪಿ, 6 ಸಶಸ್ತ್ರದಳ, 600 ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಬಿಗಿ ಬಂದೋಬಸ್ತು ಮಾಡಿದ್ದರು. ಬಸ್‌ನಿಲ್ದಾಣ, ರೈಲುನಿಲ್ದಾಣಕ್ಕೆ ಭದ್ರತೆ ನೀಡಲಾಗಿತ್ತು.