Connect with us

Dvgsuddi Kannada | online news portal | Kannada news online

ನಾನು ರೈತರ ಮಗ, ಅನ್ನ ಕೊಡುವ ರೈತರಿಗೆ ಅನ್ಯಾಯವಾಗಲು ಬಿಡಲ್ಲ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ನಾನು ರೈತರ ಮಗ, ಅನ್ನ ಕೊಡುವ ರೈತರಿಗೆ ಅನ್ಯಾಯವಾಗಲು ಬಿಡಲ್ಲ: ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ, ಬೆಂಗಳೂರು: ನಾನು ರೈತನ ಮಗ, ಅನ್ನ ಕೊಡುವ ರೈತನಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಅಧಿಕಾರಕ್ಕೆ ಅಂಟಿಕೊಂಡು ಕೂರುವವನು ಅಲ್ಲ. ವಿಧಾನಸಭೆಯಲ್ಲಿ ಚರ್ಚೆ ಮಾಡಲಾಗಿದೆ. ನನ್ನ ಬೆಳೆ, ನನ್ನ ಹಕ್ಕು. ರೈತ ಈಗ ತಾನು ಬೆಳೆಯುವ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರು ತಿಂಗಳಲ್ಲಿ ರೈತರಿಗೆ ಯಾವ ರೀತಿ ಒಳ್ಳೆಯದು ಆಗುತ್ತದೆ ಎಂಬುದನ್ನು ಕಾದು  ನೋಡಿ. ಇದೊಂದು ಐತಿಹಾಸಿಕ ನಿರ್ಣಯವಾಗಿದ್ದು. ಎಪಿಎಂಸಿಯ ಬಾಗಿಲು ಮುಚ್ಚಿಲ್ಲ. ರೈತರು ಈಗ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂದರು.

farmer protest 2

ಈ ಸಂದರ್ಭದಲ್ಲಿ ಅನಾವಶ್ಯಕವಾಗಿ ಬೇರೆ ರೈತರನ್ನು ಗೊಂದಲ ಮಾಡಬೇಡಿ ಎಂದು ರೈತರ ಜೊತೆ ಮನವಿ ಮಾಡುತ್ತೇನೆ. ನಾನು ನಿಮ್ಮ ಜೊತೆ ಇದ್ದೇನೆ. ನಿಮ್ಮ ಹಿತಕ್ಕೆ ಧಕ್ಕೆ ಆಗುವ ಕೆಲಸ ಈ ಯಡಿಯೂರಪ್ಪ ಮಾಡುವುದಿಲ್ಲ ಎಂದು ಹೇಳಿದರು. ಎಪಿಎಂಸಿ ಪೂರ್ಣ ಬಾಗಿಲು ಮುಚ್ಚಿಲ್ಲ. ಎಪಿಎಂಸಿಯಲ್ಲೂ ರೈತರು ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ಮಧ್ಯವರ್ತಿಗಳ ಹಾವಳಿ ತಪ್ಪಿಸಬಹುದು ಎಂದು ಸಮರ್ಥಿಸಿಕೊಂಡರು.

ಕಾಯ್ದೆಯಿಂದ ಶೇ.70ರಿಂದ 80ರಷ್ಟು ಅನುಕೂಲ ಆಗಲಿದೆ. ನಾನು ಶೀಘ್ರದಲ್ಲೇ ರಾಜ್ಯ ಪ್ರವಾಸ ಮಾಡುತ್ತೇನೆ. ಆಗ ರೈತರು ಎಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ  ಎಂಬುದು ಗೊತ್ತಾಗುತ್ತದೆ. ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿಯೇ ಈ ಕಾಯ್ದೆ ತರಲಾಗಿದೆ ಎಂದರು.

ಕಾಂಗ್ರೆಸ್ ನಾಯಕರ ಕಥೆ ಏನು ಅಂತಾ ಗೊತ್ತಿದೆ. ಈ ಹಿಂದೆ ಕಾಂಗ್ರೆಸ್‍ನವರು ಕಾಯ್ದೆ ಜಾರಿ ಬಗ್ಗೆ ಏನೆಲ್ಲಾ ಮಾಡಿದ್ದರು ಎಂಬುದು ಗೊತ್ತಿದೆ. ಹಿಂದೆ ಇದನ್ನು ಜಾರಿ ಮಾಡಲು ಕಾಂಗ್ರೆಸ್ ಮುಂದಾಗಿದ್ದರು. ಈಗ ಅದನ್ನು ಪ್ರಾಮಾಣೀಕವಾಗಿ ಜಾರಿ ಮಾಡಲು ಮುಂದಾಗಿದ್ದೇವೆ. ಈ ಕಾಯ್ದೆಯಿಂದ ಎಲ್ಲಾ ವರ್ಗದ ಜನರಿಗೆ ಅನುಕೂಲ ಆಗಲಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top