ಡಿವಿಜಿ ಸುದ್ದಿ, ಹರಿಹರ: ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ನಾಳೆ ಬೆಳಗ್ಗೆ 6ಕ್ಕೆ ಶ್ರೀ ಪಂಚಮಸಾಲಿ ಜಗದ್ಗುರು ಲಿಂಗೈಕ್ಯ ಡಾ. ಮಹಾಂತ ಶಿವಾಚಾರ್ಯ ಮಹಾಸ್ವಾಮೀಜಿಯವರ 83ನೇ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.
ಈ ವೇಳೆ ಶ್ರೀಗಳ ಕರ್ತೃಗದ್ದುಗೆಗೆ ಮಹಾರುದ್ರಾಭಿಷೇಕ ಪೂಜಾ ಕಾರ್ಯಕ್ರಮ ಮತ್ತು ಮಹಾ ಮಂಗಳಾರತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಮಾಜ ಬಾಂಧವರು ಮತ್ತು ಸದ್ಭಕ್ತರು ಈ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಭಾಗವಹಿಸಿ. ಜಗದ್ಗುರುಗಳ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕೆಂದು ವೀರಶೈವ ಪಂಚಮಸಾಲಿ ಜಗದ್ಗುರು ಪೀಠದ ಧರ್ಮದರ್ಶಿಗಳು ಮನವಿ ಮಾಡಿದ್ದಾರೆ.



