ಡಿವಿಜಿ ಸುದ್ದಿ, ಬೆಂಗಳೂರು: ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಗೆ ತಯಾರಿ ನಡೆಯುತ್ತಿದ್ದು, 4 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಅಕ್ಟೋಬರ್ 28 ರಂದು ನಡೆಯುವ ಚುನಾವಣೆಗೆ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್ ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ. ಪಿ.ರಂಗನಾಥ್ ಹೆಸರನ್ನು ಜೆಡಿಎಸ್ ಘೋಷಿಸಿದೆ.
ಭಾರತ ಚುನಾವಣಾ ಆಯೋಗ ಅಗಸ್ಟ್ 28ರಂದು ಚುನಾವಣೆ ನಡೆಸುವುದಾಗಿ ಪ್ರಕಟಿಸಿತ್ತು. ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಕಾರಣದಿಂದ ಈ ಚುನಾವಣೆ ಆಯೋಗ ಮುಂದೂಡಿತ್ತು.