Connect with us

Dvgsuddi Kannada | online news portal | Kannada news online

ದಾವಣಗೆರೆ: ಗಾಂಧಿ ತತ್ವಗಳ ಪಾಲನೆಯಿಂದ ಶಾಂತಿ-ಸುಧಾರಣೆ ಸಾಧ್ಯ ; ಜಿಲ್ಲಾಧಿಕಾರಿ

ದಾವಣಗೆರೆ

ದಾವಣಗೆರೆ: ಗಾಂಧಿ ತತ್ವಗಳ ಪಾಲನೆಯಿಂದ ಶಾಂತಿ-ಸುಧಾರಣೆ ಸಾಧ್ಯ ; ಜಿಲ್ಲಾಧಿಕಾರಿ

ಡಿವಿಜಿ ಸುದ್ದಿ, ದಾವಣಗೆರೆ: ಬದಲಾವಣೆ ಮೊದಲು ನಿನ್ನಲ್ಲಿ ಆಗಲಿ ಎಂಬ ಗಾಂಧೀಜಿಯವರ ತತ್ವವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಮತ್ತು ಸುಧಾರಣೆ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಭಿಪ್ರಾಯಪಟ್ಟರು.

ಮಹಾನಗರಪಾಲಿಕೆ ಆವರಣದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಸರಳವಾಗಿ ಏರ್ಪಡಿಸಲಾಗಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಾಂಧಿ ತತ್ವಗಳು, ಮೌಲ್ಯಗಳು ಎಂದಿಗೂ ಆದರ್ಶಪ್ರಾಯ. ಸತ್ಯ, ಅಹಿಂಸೆ, ಧರ್ಮದ ಮಾರ್ಗದಲ್ಲಿ ನಾವೆಲ್ಲರೂ ನಡೆಯುವ ಪ್ರಯತ್ನವನ್ನು ಮಾಡಬೇಕು. ಸತ್ಯದ ಮಾರ್ಗವನ್ನು ಮೊದಲು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು, ಧರ್ಮದ, ಶಾಂತಿಯ ಮಾರ್ಗವನ್ನು ಮೊದಲು ನಮ್ಮಲ್ಲಿ ನಾವು ಅಳವಡಿಸಿಕೊಂಡಲ್ಲಿ ಗಾಂಧೀಜಿಯವರ ರಾಮರಾಜ್ಯದ ಕನಸು ನನಸಾಗುವುದು ಎಂದರು.

ಜಗ ಮೆಚ್ಚಿದ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಸರಳ, ಸಜ್ಜನಿಕೆ ನಮಗೆ ಮಾದರಿಯಾಗಿದೆ. ಸರಳತೆ ಅವರ ಜೀವನ ಸಂದೇಶವಾಗಿದೆ ಎಂದರು.

ಮಹಾನಗರಪಾಲಿಕೆ ಮಹಾಪೌರ ಬಿ.ಜಿ.ಅಜಯಕುಮಾರ್ ಮಾತನಾಡಿ, ಗಾಂಧೀಜಿಯವರ ಮುಖ್ಯ ತತ್ವಗಳಾದ ಸತ್ಯ, ಅಹಿಂಸೆ, ನ್ಯಾಯದ ಹಾದಿಯಲ್ಲಿ ನಡೆಯಬೇಕಿದ್ದು, ಇಂತಹ ಹಿರಿಯರ ಮಾರ್ಗದಲ್ಲಿ ನಡೆದರೆ ದೇಶ ಸಮೃದ್ದಿಯಾಗುತ್ತದೆ. ಮನುಕುಲಕ್ಕೆ ಒಳಿತಾಗಲು ಏನೇನು ಅಂಶಗಳು ಬೇಕೋ ಅವೆಲ್ಲವೂ ಅವರ ನಡೆಯಲ್ಲಿವೆ. ಈ ಹಿನ್ನೆಲೆಯಲ್ಲಿ ಗಾಂಧೀಜಿ ಮಾರ್ಗದಲ್ಲಿ ಸಾಗಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಗಾಂಧಿಯವರು ‘ನನ್ನ ಬದುಕೇ ನನ್ನ ಸಂದೇಶ’ ಎನ್ನುವ ರೀತಿಯಲ್ಲಿ ಬದುಕಿದರು. ಅವರ ಮೌಲ್ಯಗಳು, ತತ್ವಾದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನಮ್ಮ ವೈಯಕ್ತಿ ಮತ್ತು ವೃತ್ತಿ ಜೀವನ ಆದರ್ಶಪ್ರಾಯವಾಗುತ್ತದೆ ಎಂದರು.

ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಗಾಂಧೀಜಿ ನಮ್ಮಂತೆ ಸಾಮಾನ್ಯ ವ್ಯಕ್ತಿಯಂತಿದ್ದರೂ ಅವರ ನಿಲುವು ನಿರ್ಧಾರಗಳಿಂದ ಅವರು ಮಹಾತ್ಮರಾಗಿದ್ದಾರೆ. ಎಲ್ಲ ಧರ್ಮಗ್ರಂಥಗಳ ಸಾರವನ್ನು ಅರಿತು ನಮಗೆ ತಿಳಿಸಿದ್ದಾರೆ. ಗಾಂಧೀಜಿಯವರ ಬಗ್ಗೆ ಹಗುರವಾಗಿ ಕೆಲವರು ಮಾತನಾಡುತ್ತಾರೆ. ಆದರೆ ಹಾಗೆ ಮಾಡುವ ಮುನ್ನ ಅವರ ಜೀವನದ ವಾಸ್ತವಾಂಶಗಳನ್ನು ತಿಳಿದುಕೊಳ್ಳಬೇಕು ಎಂದರು.

ಸುಶ್ರಾವ್ಯ ಗಾಂಧಿ ಪ್ರಿಯ ಗಾಯನ : ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಶಿಕ್ಷಕರು ಗಾಂಧೀಜಿಯವರಿಗೆ ಪ್ರಿಯವಾಗಿದ್ದ ವೈಷ್ಣವಜನತೋ, ರಘುಪತಿ ರಾಜಾರಾಂ ಸೇರಿದಂತೆ ಇತರೆ ಗೀತೆಗಳ ಸುಶ್ರಾವ್ಯ ಗಾಯನ ಪ್ರಸ್ತುತಪಡಿಸಿದರು. ಹಾಗೂ ಸರ್ವಧರ್ಮ ಪ್ರಾರ್ಥನೆಯನ್ನು ಮಾಡಿದರು.

ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಸ್ವಾಗತಿಸಿದರು. ಸಂಗೀತ ಶಿಕ್ಷಕ ಅಜಯ್ ನಾರಾಯಣ್ ಪ್ರಾರ್ಥಿಸಿದರು. ಶಿಕ್ಷಣ ಸಂಯೋಜಕ ಕೆ.ಜಿ.ಗೌಡ್ರು ನಿರೂಪಿಸಿದರು. ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ವಂದಿಸಿದರು.

ಕಾರ್ಯಕ್ರಮದಲ್ಲಿ ಉಪ ಮಹಾಪೌರ ಸೌಮ್ಯ ನರೇಂದ್ರಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್,  ಸ್ಥಾಯಿ ಸಮಿತಿ ಅಧ್ಯಕ್ಷರಾದ ವೀರೇಶ್, ಪ್ರಸನ್ನ ಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕರಾದ ಎ. ನಾಗರಾಜ್, ಪಾಲಿಕೆ ಸದಸ್ಯರು, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತರಾದ ವಿಶ್ವನಾಥ್ ಮುದಜ್ಜಿ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ದೂಢಾ ಆಯುಕ್ತ ಕುಮಾರಸ್ವಾಮಿ, ನಗರಾಭಿವೃದ್ದಿಕೋಶದ ಯೋಜನಾ ನಿರ್ದೇಶಕಿ ನಜ್ಮಾ, ವಿಶೇಷ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ದಾವಣಗೆರೆ ತಹಶೀಲ್ದಾರ್ ಗಿರೀಶ್ ಇತರೆ ಅಧಿಕಾರಿಗಳು ಹಾಜರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top