ಡಿವಿಜಿ ಸುದ್ದಿ, ದಾವಣಗೆರೆ: ಮಾಸ್ಕ್ ಹಾಕದವರಿಗೆ ನಗರ ಪ್ರದೇಶದಲ್ಲಿ1000 ರೂಪಾಯಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂಪಾಯಿ ದಂಡ ವಿಧಿಸುವಂತೆ ಸರ್ಕಾರದಿಂದ ಆದೇಶ ಬಂದಿದೆ. ಹೀಗಾಗಿ ಇಂದಿನಿಂದಲೇ ಮಾಸ್ಕ್ ಹಾಕದವರಿಗೆ ದಂಡ ಹಾಕಲಾಗುವುದು ಎಂದು ಎಸ್.ಪಿ. ಹನುಮಂತರಾಯ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಎಲ್ಲ ಕಡೆ ಹರಡುತ್ತಿರುವುದರಿಂದ ನಿಯಂತ್ರಣಕ್ಕೆ ತರಲು ಸರ್ಕಾರ ಮಾಸ್ಕ್ ಕಡ್ಡಾಯ ಮಾಡಿದೆ. ಮಾಸ್ಕ್ ಹಾಕದೇ ಓಡಾಡುವರಿಗೆ ನಗರ ಪ್ರದೇಶದಲ್ಲಿ ಒಂದು ಸಾವಿರ ರೂಪಾಯಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ದಂಡ ವಿಧಿಸಲಾಗುವುದು.
ಸರ್ಕಾರ ಕಟ್ಟುನಿಟ್ಟಾಗಿ ಆದೇಶ ಹೊರಡಿಸಿದ್ದು, ಎಲ್ಲ ಸರ್ಕಾರದ ಆದೇಶವನ್ನು ಪಾಲಿಸಬೇಕಿದೆ. ನಿನ್ನೆ ಸರ್ಕಾರದ ಆದೇಶ ನಮ್ಮ ಕೈ ಸೇರಿದೆ. ಇಂದಿನಿಂದಲೇ ದಂಡ ವಿಧಿಸಲಾವುದು. ಸಾರ್ವಜನಿಕರು ದಂಡ ಹಾಕುವುದಕ್ಕೆ ಅನುವು ಮಾಡಿಕೊಡದೇ, ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದರು.
ಮೇಯರ್ ಅಜಯ್ ಕುಮಾರ್ ಮಾತನಾಡಿ, ಕೊರೊನಾದಿಂದ ಸಾಕಷ್ಟು ಜನ ಮೃತಪಟ್ಟಿದ್ದಾರೆ. ಹೀಗಾಗಿ ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿದೆ. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಮಾಸ್ಕ್ ಹಾಕುವುದರಿಂದ ನಿಮಗೆ ಏನು ತೊಂದರೆ ಆಗುತ್ತದೆ. ಇದನ್ನು ವಿರೋಧಿಸುವುದು ಬೇಡ. ಜನರಿಗೋಸ್ಕಾರ ಸರ್ಕಾರ ಕಾನೂನು ಜಾರಿಗೆ ತಂದಿದೆ. ಇದನ್ನು ಪ್ರತಿಯೊಬ್ಬರು ಪಾಲಿಸಬೇಕಿದೆ ಎಂದು ತಿಳಿಸಿದರು.



