ಡಿವಿಜಿ ಸುದ್ದಿ, ಬೆಂಗಳೂರು: ದಿವಂಗತ ಐಎಎಸ್ ಅಧಿಕಾರಿ ಪತ್ನಿ ಡಿ.ಕೆ. ರವಿ ಪತ್ನಿ ಕುಸುಮಾ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನೆಲೆ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಅಧ್ಯಕ್ಷ ಜಿ, ಪರಮೇಶ್ವರ್ , ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿರುವ ಕುಸುಮಾ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ತಂದೆ ಹನುಮಂತರಾಯಪ್ಪ ಅವರ ಜೊತೆ ಶುಭಗಳಿಗಾಗಿ ಒಂದು ಗಂಟೆ ಕಾಲ ಕಾದು ಕಾಂಗ್ರೆಸ್ ಸೇರಿದ್ದಾರೆ. ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಕುಸುಮಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ ಮುನಿರತ್ನಂ ಬಿಜೆಪಿ ಸೇರಿದ ಹಿನ್ನೆಲೆ ಇದೀಗ ಉಪ ಚುನಾವಣೆ ಎದುರಾಗಿದೆ.



