Connect with us

Dvgsuddi Kannada | online news portal | Kannada news online

ಡಿಕೆಶಿಗೆ ಬಿಗ್ ಶಾಕ್;  ನಿವಾಸ, ಕಚೇರಿ ಮೇಲೆ ಸಿಬಿಐ ದಾಳಿ ; 50 ಲಕ್ಷ ವಶ , ಬಂಧನ ಸಾಧ್ಯತೆ

ಪ್ರಮುಖ ಸುದ್ದಿ

ಡಿಕೆಶಿಗೆ ಬಿಗ್ ಶಾಕ್;  ನಿವಾಸ, ಕಚೇರಿ ಮೇಲೆ ಸಿಬಿಐ ದಾಳಿ ; 50 ಲಕ್ಷ ವಶ , ಬಂಧನ ಸಾಧ್ಯತೆ

ಡಿವಿಜಿ ಸುದ್ದಿ, ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ, ಕಚೇರಿ  ಸೇರಿದಂತೆ 15 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, 50 ಲಕ್ಷ ವಶ ಪಡಿಸಿಕೊಂಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಸಾಧ್ಯತೆ  ಇದೆ.

ಡಿ.ಕೆ ಶಿವಕುಮಾರ್ ಸದಾಶಿವ ನಗರ ನಿವಾಸ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಮತ್ತು ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳಿಗಾಗಿ ಸಿಬಿಐ ಶೋಧ ನಡೆಸಲಾಗುತ್ತಿದೆ.

ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರನ್ನು 2019ರ ಸೆಪ್ಟೆಂಬರ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ನಂತರ ಆ ಪ್ರಕರಣದ ಸಿಬಿಐ ತನಿಖೆಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಒಂದು ವರ್ಷದಿಂದ ಸಿಬಿಐ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿರುವ ಸಿಬಿಐ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಇಂದು ಬೆಳಿಗ್ಗೆ ದಿಢೀರ್ 15 ಕಡೆ  ದಾಳಿ ಮಾಡಿದ್ದಾರೆ.

ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ.‌ಸುರೇಶ್ ಅವರ ದೆಹಲಿಯ ಮನೆ ಮೇಲೂ ಸಿಬಿಐ ದಾಳಿ ನಡೆಸಿದ್ದು, ಶೋಧ ನಡೆಸುತ್ತಿದ್ದಾರೆ. ದೆಹಲಿಯ ನಾರ್ತ್ ಅವೆನ್ಯೂದಲ್ಲಿರುವ ನರ್ಮದಾ ಅಪಾರ್ಟ್ ಮೆಂಟ್ ನಲ್ಲಿರುವ ಸಂಸದ ಡಿ.ಕೆ. ಸುರೇಶ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ತಪಾಸಣೆಯಲ್ಲಿ ತೊಡಗಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top