ಡಿವಿಜಿ ಸುದ್ದಿ, ಮಡಿಕೇರಿ:ಶಾಲೆಗಳನ್ನು ಪುನರಾರಂಭಿಸುವ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದ್ದರೂ ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ಸದ್ಯಕ್ಕೆ ಶಾಲೆ ಆರಂಭಿಸುವ ಚಿಂತನೆ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿದ್ದು, ಶಾಲೆ ಆರಂಭಿಸುವ ಕುರಿತು ತಜ್ಞರ ಸಲಹೆ ಪಡೆಯಲಾಗಿದೆ. ಆದರೆ, ತಜ್ಞರು ಶಾಲೆ ಆರಂಭಿಸುವುದಕ್ಕೆ ಇದು ಸೂಕ್ತ ಸಮಯವಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ ಎಂದರು.
ಇನ್ನೂ ಮೂರು ವಾರಗಳ ಕಾಲ ಪರಿಸ್ಥಿತಿ ಅವಲೋಕಿಸಲಾಗುವುದು. ನಂತರ ನೆರೆಯ ರಾಜ್ಯಗಳ ಪರಿಸ್ಥಿತಿ ಗಮನಿಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.