ಡಿವಿಜಿ ಸುದ್ದಿ, ಬೆಂಗಳೂರು: ವಿಧಾನಸಭಾ ಉಪ ಚುನಾವಣೆ ಕದನಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಇಂದು ಅಧಿಕೃತವಾಗಿ ಘೋಷಣೆ ಮಾಡಿದ್ದು, ಶಿರಾ ಕ್ಷೇತ್ರದಿಂದ ಟಿ.ಬಿ ಜಯಚಂದ್ರ ಹಾಗೂ ರಾಜರಾಜೇಶ್ವರಿ ನಗರದಿಂದ ಎಚ್. ಕುಸುಮಾ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಕೆಪಿಸಿಸಿ ಎರಡು ಕ್ಷೇತ್ರದಿಂದಲ್ಲೂ ಒಬ್ಬರ ಹೆಸರನ್ನೇ ಹೈಕಮಾಂಡ್ ಗೆ ಕಳುಹಿಸಿಕೊಡಲಾಗಿತ್ತು. ಇದೀಗ ಕಾಂಗ್ರೆಸ್ ಹೈಕಮಾಂಡ್ ಈ ಇಬ್ಬರ ಹೆಸರನ್ನು ಪರಿಗಣಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ.
ಈ ಹಿಂದೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಶಿರಾ ಕ್ಷೇತ್ರದಿಂದ ಟಿ.ಬಿ ಜಯಚಂದ್ರ ಸೋತಿದ್ದರು. ಇನ್ನು ಆರ್ ಆರ್ ನಗರದದಲ್ಲಿ ಜೆಡಿಎಸ್ ಪಕ್ಷದಲ್ಲಿದ್ದ ಹನುಮಂತರಾಯಪ್ಪ ಅವರ ಪುತ್ರಿ ಎಚ್. ಕುಸುಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಟಿಕೆಟ್ ನೀಡಲಾಗಿದೆ.



