ಡಿವಿಜಿ ಸುದ್ದಿ, ಮೈಸೂರು: ಈ ಬಾರಿ ನಾಡಹಬ್ಬ ದಸರಾ ಮಹೋತ್ಸವನ್ನು ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಅವರು ಉದ್ಘಾಟಿಸಲಿದ್ದಾರೆ.
ಅ.17ರಂದು ಚಾಮುಂಡಿಬೆಟ್ಟದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಡಾ. ಸಿ.ಎನ್ ಮಂಜುನಾಥ್ ದಸರಾಗೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಮೈಸೂರಿನ ಕೊರೊನಾ ವಾರಿಯರ್ಸ್ ಗಳಾದ ಪೌರಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆ ನೂರ್ ಜಾನ್, ಪೊಲೀಸ್ ಕಾನ್ಸ್ ಟೆಬಲ್ ಪಿ.ಕುಮಾರ್, ಸಾಮಾಜಿಕ ಕಾರ್ಯಕರ್ತ ಆಯೂಬ್ ಅಹಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ತಿಳಿಸಿದರು.
ತಜ್ಞರ ತಂಡ ನೀಡಿದ ವರದಿ ಆಧಾರದಲ್ಲಿ ಈ ಬಾರಿಯ ದಸರಾ ಆಚರಣೆ ನಡೆಯಲಿದ್ದು, ಇದರಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ತಂಡದ ಶಿಫಾರಸಿನ ಅನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ ಎಂದರು .



