ನವದೆಹಲಿ: ಕೃಷಿ ಮಸೂದೆ ವಿರೋಧಿಸುತ್ತಿರುವ ವಿಪಕ್ಷಗಳ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಹರಿಹಾಯ್ದರು. ದೇಶ ಸುಧಾರಣಾ ಕ್ರಮಗಳಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ದಲ್ಲಾಳಿಗಳು ಮತ್ತು ಮಧ್ಯವರ್ತಿಗಳ ಬೆಂಬಲದಿಂದ ವಿಪಕ್ಷಗಳು ರಾಜಕಾರಣ ಮಾಡುತ್ತಿವೆ. ಈ ಮೂಲಕ ಕೃಷಿ ಮಸೂದೆಗಳ ಕುರಿತು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಕಿಡಿಕಾರಿದರು.
ಸ್ವಾಮಿತ್ವ ಯೋಜನೆಯಡಿ ಆಸ್ತಿ ಹಕ್ಕು ಕಾರ್ಡ್‌ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸರ್ಕಾರ ತಂದಿರುವ ಸುಧಾರಣಾ ಕ್ರಮಗಳನ್ನು ವಿರೋಧಿಸುತ್ತಿರುವವರನ್ನು ಕೃಷಿಕರು ಬೆಂಬಲಿಸುವುದಿಲ್ಲ. ಕಳೆದ ಆರು ವರ್ಷಗಳಲ್ಲಿ ತಮ್ಮ ಸರ್ಕಾರ ಗ್ರಾಮಗಳು, ಗ್ರಾಮೀಣ ಜನರಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡಿದೆ. ಹಿಂದಿನ ಆರು ದಶಕಗಳಲ್ಲಿ ಇಷ್ಟು ಕೆಲಸ ಆಗಿರಲಿಲ್ಲ ಎಂದರು.
A historic effort towards rural transformation. #SampatiSeSampanta https://t.co/VYNk6nTcg6
— Narendra Modi (@narendramodi) October 11, 2020
ಬ್ಯಾಂಕ್ ಖಾತೆ ತೆರೆದಿರುವುದು, ಶೌಚಾಲಯಗಳು ಮತ್ತು ಮನೆಗಳ ನಿರ್ಮಾಣ, ಅಡುಗೆ ಅನಿಲ ಯೋಜನೆ ಮತ್ತು ಗ್ರಾಮೀಣ ವಿದ್ಯುದ್ದೀಕರಣ ಕಾರ್ಯ ಮಾಡಲಾಗಿದೆ. ಈ ಮೊದಲು ದೇಶದಲ್ಲಿ ಆಡಳಿತ ನಡೆಸಿದವರು ಗ್ರಾಮೀಣ ಭಾರತವನ್ನು ಮರೆತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.