ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಅ.12, 13ರಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು,ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅ. 15 ವರೆಗೆ ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ವಾಯುಭಾರ ಕುಸಿತ ಕಂಡಿದ್ದು, ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ರಾಯ
ಚೂರು, ಯಾದಗಿರಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ಗುಡುಗು, ಸಿಡಿಲಿನೊಂದಿಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.



