ಡಿವಿಜಿ ಸುದ್ದಿ, ಬೆಂಗಳೂರು: ರಾಜರಾಜೇಶ್ವರಿ ಕ್ಷೇತ್ರ ಉಪ ಚುನಾವಣೆಗೆ ನಾಳೆ ಬೆಳಗ್ಗೆ 11ಗಂಟೆಗೆ ಮುನಿರತ್ನ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಹಕಾರ ಖಾತೆಯ ಸಚಿವ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ಬೆಳಗ್ಗೆ9.30ಕ್ಕೆ ಮುನಿರತ್ನ ಅವರನ್ನು ಪಕ್ಷದ ಕಚೇರಿಗೆ ಬರಲು ಹೇಳಿದ್ದಾರೆ. 11 ಗಂಟೆಗೆ ಮುನಿರತ್ನ ನಾಮಪತ್ರ ಸಲ್ಲಿಸುತ್ತಾರೆ. ಸಿಎಂ ಯಡಿಯೂರಪ್ಪನವರೇ ಈ ಬಗ್ಗೆ ಅಧಿಕೃತವಾಗಿ ತಿಳಿಸುತ್ತಾರೆ. ಅಭ್ಯರ್ಥಿ ವಿಚಾರವಾಗಿ ಯಾವುದೇ ಗೊಂದಲ ಇಲ್ಲ ಎಂದರು.

ಈ ವಿಚಾರದ ಬಗ್ಗೆ ಮುನಿರತ್ನ ಪ್ರತಿಕ್ರಿಯಿಸಿ, ಎಸ್.ಟಿ.ಸೋಮಶೇಖರ್ ಹೇಳಿಕೆಯ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ತೀರ್ಮಾನವೇ ಅಂತಿಮ. ಪಕ್ಷದಿಂದ ನನಗೆ ಯಾವುದೇ ಮಾಹಿತಿ ಇಲ್ಲ. ಸೋಮಶೇಖರ್ ಹೇಳಿಕೆ ಬಗ್ಗೆ ಅವರ ಜತೆಯೇ ಮಾತಾಡುತ್ತೇನೆ ಎಂದು ತಿಳಿಸಿದರು.
ಊಟದ ಸಮಯ, ಊಟಕ್ಕಾಗಿ ಸಿಎಂ ಯಡಿಯೂರಪ್ಪ ಅವರ ಜೊತೆ ಬಂದಿದ್ದೇವೆ. ನಾಳೆ ಬಿಜೆಪಿ ಕಚೇರಿಗೆ ಬರುವಂತೆ ಹೇಳಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.ಈ ವೇಳೆ ಸಚಿವ ಸೋಮಣ್ಣ , ಆರ್ ಅಶೋಕ್, ಬಸವರಾಜ್ ಬೊಮ್ಮಾಯಿ ಭಾಗಿಯಾಗಿದ್ದರು.



