Connect with us

Dvgsuddi Kannada | online news portal | Kannada news online

ಶಿರಾ ಬೈ ಎಲೆಕ್ಷನ್: ರಾಜೇಶ್ ಗೌಡ ನಾಮಪತ್ರ ಸಲ್ಲಿಕೆ

ರಾಜಕೀಯ

ಶಿರಾ ಬೈ ಎಲೆಕ್ಷನ್: ರಾಜೇಶ್ ಗೌಡ ನಾಮಪತ್ರ ಸಲ್ಲಿಕೆ

ಡಿವಿಜಿ ಸುದ್ದಿ, ತುಮಕೂರು: ಶಿರಾ ಬೈ ಎಲೆಕ್ಷನ್  ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎಂ.ರಾಜೇಶ್ ಗೌಡ ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಡಿಸಿಎಂ ಗೋವಿಂದ ಕಾರಜೋಳ, ಬಿಜೆಪಿ ನಗರ ಘಟಕದ ಅಧ್ಯಕ್ಷ ವಿಜಯ ರಾಜ್ ಸಾಥ್ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಶ್ ಗೌಡ, ಕ್ಷೇತ್ರದ  ಜನರು ಈಗಾಗಲೇ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ನೋಡಿದ್ದಾರೆ. ಬಿಜೆಪಿಗೆ ಅವಕಾಶ ನೀಡುವ ಭರವಸೆ ಇದೆ. ಶಿರಾದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಟಿಕೆಟ್ ಆಕಾಂಕ್ಷಿಗಳಾಗಿದ್ದ ಎಸ್‌.ಆರ್.ಗೌಡ, ಬಿ.ಕೆ. ಮಂಜುನಾಥ್ ಮತ್ತು ನನ್ನ ನಡುವೆ ಭಿನ್ನಾಭಿಪ್ರಾಯ ಇಲ್ಲ.

ಶಿರಾ ತಾಲ್ಲೂಕಿನ ಜನರ ಆರಾಧ್ಯ ದೈವ ಜುಂಜಪ್ಪ ಸ್ವಾಮಿಯ ಆಶೀರ್ವಾದ ರಾಜೇಶ್ ಗೌಡ ಅವರ ಮೇಲಿದೆ. ದೇಶದ ಶೇ 85 ರಷ್ಟು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇದೆ. ದೇಶದ ಜನರು ಎಲ್ಲೆಡೆ ಬಿಜೆಪಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್ ಗೌಡ, ಸಂಸದ ಎ.ನಾರಾಯಣ ಸ್ವಾಮಿ,  ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್ ‌ಇದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top