ದಾವಣಗೆರೆ: ದಸರಾ, ದೀಪಾವಳಿ ಹಬ್ಬ ಆಚರಣೆಯ ಮಾರ್ಗಸೂಚಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ಡಿವಿಜಿ ಸುದ್ದಿ, ದಾವಣಗೆರೆ:ಅಕ್ಟೋಬರ್ ನಿಂದ ಡಿಸೆಂಬರ್ ತಿಂಗಳಿನವರೆಗೂ ದಸರಾ, ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳಿವೆ. ಸಂಭ್ರಮ ಭರದಲ್ಲಿ ಸರ್ಕಾರದ ಮಾರ್ಗಸೂಚಿ ಮರೆಯಬಾರದು  ಎಂದು  ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಜನರಲ್ಲಿ  ಮನವಿ ಮಾಡಿದ್ದಾರೆ.

ದಸರಾ, ದೀಪಾವಳಿ, ಈದ್‍ ಮಿಲಾದ್ ಸೇರಿದಂತೆ ವಿವಿಧ ಹಬ್ಬಗಳ ಆಚರಣೆ ಸಂದರ್ಭದಲ್ಲಿ ವ್ಯಾಪಾರಸ್ಥರು, ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಂಡು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಈಗಾಗಲೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಎಲ್ಲರೂ ಈ ಮಾರ್ಗಸೂಚಿಯನ್ನು ತಪ್ಪದೆ ಪಾಲಿಸಿ, ರೋಗ ಹರಡುವುದನ್ನು ತಡೆಗಟ್ಟಲು ಸಹಕರಿಸಬೇಕು ಎಂದರು.

ಹಬ್ಬಗಳನ್ನು ಜನರು ಒಂದು ನಿರ್ದಿಷ್ಟ ಪ್ರದೇಶದಲ್ಲಿ ಒಂದು ದಿನ ಅಥವಾ ಒಂದು ವಾರ ಅಥವಾ ವಾರಕ್ಕಿಂತ ಹೆಚ್ಚುದಿನ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಮೇಳಗಳು, ರ್ಯಾಲಿಗಳು, ಪ್ರದರ್ಶನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆಗಳು ಮತ್ತಿತರೆ ಕಾರ್ಯಕ್ರಮಗಳನ್ನು ಆಚರಿಸಲಿರುವವರು ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು.

ದಸರಾ ಹಬ್ಬವನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕು. 100 ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ. ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಎಲ್ಲ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದ್ದು, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಹಬ್ಬಗಳು ಪೂರಕವಾಗಬೇಕು. ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕು.

ದೀಪಾವಳಿ ಹಬ್ಬ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆ ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡಬೇಕು.ಪಟಾಕಿ ಮಾರಾಟದ ಮಳಿಗೆಗಳನ್ನು ನ. 01 ರಿಂದ ನ. 17 ರವರೆಗೆ ಮಾತ್ರ ತೆರೆಯಲು ಅವಕಾಶವಿದೆ. ಪರವಾನಿಗೆದಾರರು ಸಂಬಂಧಪಟ್ಟ ಇಲಾಖೆ ಪ್ರಾಧಿಕಾರದಿಂದ ನೀಡಿರುವ ಪರವಾನಿಗೆಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಯನ್ನು ಇಡಬೇಕು. ಬೇರೆ ಸ್ಥಳದಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ ಪ್ರಾಧಿಕಾರಗಳು ಅನುಮತಿ ನೀಡಬೇಕು.

ಪಟಾಕಿ ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು. ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ/ ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು ಅಲ್ಲದೆ ಪರವಾನಗಿ ಪತ್ರ ಪಡೆದವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.

ಪಟಾಕಿ ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರನ್ನು ಗುರುತಿಸಿ, ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ತಪ್ಪದೆ ಕೈಗೊಳ್ಳಬೇಕು ಪಟಾಕಿ ಮಾರುವ ವ್ಯಾಪರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪಟಾಕಿ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು.

ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ  ಕಾರ್ಪೋರೇಷನ್ ಪ್ರಾಧಿಕಾರಗಳು ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ರಾಷ್ಟ್ರೀಯ ನಿರ್ದೇಶನಗಳು ಹಾಗೂ ರಾಜ್ಯ ಸರ್ಕಾರದ ಆದೇಶ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *