ಡಿವಿಜಿ ಸುದ್ದಿ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರತಿಯೊಂದು ಕುಟುಂಬಕ್ಕೆ 25 ಸಾವಿರ ರೂಪಾಯಿ ನೀಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದರು.
ಸಿಎಂ ಅಧಿಕೃತ ನಿವಾಸದಲ್ಲಿ ತುರ್ತು ಸಭೆ ನಡೆಸಿದ ಯಡಿಯೂರಪ್ಪ, ನಿನ್ನೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಕೆಲ ಪ್ರದೇಶಗಳಿಗೆ ನೀರು ನುಗ್ಗಿದೆ. ಹೀಗಾಗಿ ಹಾನಿ ಒಳಗಾದ ಪ್ರದೇಶದ ಪ್ರತಿ ಕುಟುಂಬಕ್ಕೆ 25 ಸಾವಿರ ರೂಪಾಯಿ ನೀಡಲು ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದೇವೆ. ಈಗಾಗಲೇ ಹಾನಿ ಪ್ರದೇಶಕ್ಕೆ ಆರ್. ಅಶೋಕ್ ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ. ಹೀಗಾಗಿ ಈಗ ತಾತ್ಕಾಲಿಕವಾಗಿ 25 ಸಾವಿರ ಚಕ್ ಮೂಲಕ ಪರಿಹಾರ ನೀಡಲಾಗುವುದು ಎಂದರು.
ಈಗ ನಾನೇ ಸ್ವತಃ ಸ್ಥಳ ಪರಿಶೀಲನೆ ಮಾಡುತ್ತೇನೆ. ನಂತರ ಅಗತ್ಯವಿದ್ದರೆ, ಹೆಚ್ಚಿನ ಪರಿಹಾರ ನೀಡಲಾಗುವುದು. ಶಾಶ್ವತ ಪರಿಹಾರ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.ಇದರೊಂದಿಗೆ ಬೆಂಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಖುದ್ದು ಸಿಎಂ ಅಖಾಡಕ್ಕೆ ಇಳಿದಿದ್ದಾರೆ.



